HomeKarnataka10 ಲಕ್ಷ ರೂ.ಗೆ ನಕಲಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

10 ಲಕ್ಷ ರೂ.ಗೆ ನಕಲಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಉಡುಪಿ: ಅಂಬರ್ ಗ್ರೀಸ್ ಹೆಸರಲ್ಲಿ ಮೇಣದ ರೀತಿಯಲ್ಲಿದ್ದ ವಸ್ತುವನ್ನು ಮಾರಾಟ ಮಾಡಲು ಯತ್ನಿಸಿದ ಮೂವರು ವಂಚಕರನ್ನು ಬೈಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಗಾಂಧಿ ಬಜಾರ್ ನ ನಿರಂಜನ್(26), ಟ್ಯಾಂಕ್ ಮೊಹಲ್ಲಾದ ಮಿಲನ್(27), ಪೆನ್ಷನ್ ಮೊಹಲ್ಲಾದ ಪೃಥ್ವಿ(31) ಬಂಧಿತ ಆರೋಪಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಳದಿ ಬಣ್ಣದ ಮೇಣದಂತೆ ಇರುವ ವಸ್ತುವನ್ನು ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂದು ನಂಬಿಸಿ ಮಾರಾಟಕ್ಕೆ ಆರೋಪಿಗಳು ಯತ್ನಿಸಿದ್ದಾರೆ. 10 ಲಕ್ಷ ರೂಪಾಯಿಗೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಮುಂದಾಗಿದ್ದ ಇವರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular