ಕಲಬುರಗಿ: ಕಿಡಿಗೇದಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಮುತ್ತಗಾ ಗ್ರಾಮದಲ್ಲಿ ನಡೆದಿದೆ.
ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿರುವ ಕಿಡಿಗೇಡಿಗಳ ಕೃತ್ಯಖಂಡಿಸಿ ಕಲಬುರಗಿ-ಶಹಬಾದ್ ಮಾರ್ಗದಲ್ಲಿ ಸಮುದಾಯದ ಜನರ ಪ್ರತಿಭಟನೆ ತೀವ್ರಗೊಂಡಿದೆ. ಕಿಡಿಗೇದಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವುದರಿಂದ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿದ್ದು, ರಸ್ತೆ ಇಕ್ಕೆಲೆಗಳಲ್ಲಿ ವಾಹನಗಳು ನಿಂತಿವೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಸ್ಥಿತಿ ತಿಳಿಗೊಳಿಸುವ ಯತ್ನ ನಡೆಸಿದ್ದಾರೆ.