HomeLatest NewsBREAKING: ಆಂಬುಲೆನ್ಸ್ ಗೆ ದಾರಿ ಬಿಡದೇ ಹುಚ್ಚಾಟ: ಬೈಕ್ ಸವಾರ ಅರೆಸ್ಟ್

BREAKING: ಆಂಬುಲೆನ್ಸ್ ಗೆ ದಾರಿ ಬಿಡದೇ ಹುಚ್ಚಾಟ: ಬೈಕ್ ಸವಾರ ಅರೆಸ್ಟ್

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದೇ ಬೈಕ್ ಓಡಿಸುತ್ತಿದ್ದ ಬೈಕ್ ಸವಾರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯ ಮೊಹಮ್ಮದ್ ಮನ್ಸೂರ್ ಖಾನ್ ಬಂಧಿತ ವ್ಯಕ್ತಿ. ನಿನ್ನೆ ಬಿಸಿಲೆಘಾಟ್ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬುಲೆನ್ಸ್ ಗೆ ದಾರಿ ಬಿಡದೇ ಆಂಬುಲೆನ್ಸ್ ಮುಂದೆ ಬೈಕ್ ಓಡಿಸಿ ಮನ್ಸೂರ್ ಖಾನ್ ಹುಚ್ಚಾಟವಾಡಿದ್ದ.

ಸುಮಾರು 3-6 ಕಿ.ಮೀ ವರೆಗೂ ಆಂಬುಲೆನ್ಸ್ ಗೆ ದಾರಿ ಬಿಡದೇ ಬೈಕ್ ಓಡಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬೈಕ್ ನಂಬರ್ ಪ್ಲೇಟ್ ಆಧರಿಸಿ ಬೈಕ್ ಸವಾರ ಮೊಹಮ್ಮದ್ ಮನ್ಸೂರ್ ಖಾನ್ ನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular