ಬೆಳಗಾವಿ: ಆಂಬುಲೆನ್ಸ್ ಚಾಲಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರ ಠಾನೆ ವ್ಯಾಪ್ತಿಯಲ್ಲಿ ನಡೆದಿದೆ.
ಓಂಕಾರ್ ಪವಾರ್ (25) ಮೃತ ಚಾಲಕ. ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ತಿಂಗಳಿಂದ ಸಂಬಳ ನೀಡದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು. ಹಲವು ಬಾರಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡಿದ್ದರು. ಇದರಿಂದ ನೊಂದ ಓಂಕಾರ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಹಾಪುರದ ಬಾಡಿಗೆ ಮನೆಯಲ್ಲಿಯೇ ನೇಣಿಗೆ ಕೊರೊಳೊಡ್ಡಿದ್ದಾರೆ. ಓಂಕಾರ್ ಗೆ ವಿವಾಹವಾಗಿ ಒಂದು ಮಗು ಕೂಡ ಇದೆ. ಪತಿಯನ್ನು ಕಳೆದುಕೊಂಡ ಪತ್ನಿ ಹಾಗೂ ಕಂದಮ್ಮ ದಿಕ್ಕೆಟ್ಟು ಹೋಗಿದ್ದಾರೆ. ಸೆಂಟ್ರಾ ಆಸ್ಪತ್ರೆ ಹಾಗೂ ಆಡಳಿತ ಮಂಡಳಿವಿರುದ್ಧ ಕುಟುಂಬದವರು, ಆಂಬುಲೆನ್ಸ್ ಚಾಲಕರ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.