HomeKarnatakaBIG NEWS: ರಾಜ್ಯಾದ್ಯಂತ 108 ಆಂಬುಲೆನ್ಸ್ ಗೆ ‘ಮೇಜರ್ ಸರ್ಜರಿ’: ವ್ಯವಸ್ಥೆಗೆ ಹೊಸ ರೂಪ

BIG NEWS: ರಾಜ್ಯಾದ್ಯಂತ 108 ಆಂಬುಲೆನ್ಸ್ ಗೆ ‘ಮೇಜರ್ ಸರ್ಜರಿ’: ವ್ಯವಸ್ಥೆಗೆ ಹೊಸ ರೂಪ

ತುಮಕೂರು: ರಾಜ್ಯಾದ್ಯಂತ 108 ಆಂಬುಲೆನ್ಸ್ ವ್ಯವಸ್ಥೆ ಸರಿಪಡಿಸಲು ಈ ಬಾರಿ ಬಜೆಟ್ ನಲ್ಲಿ ಮೇಜರ್ ಸರ್ಜರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 108 ಆಂಬುಲೆನ್ಸ್ ವ್ಯವಸ್ಥೆಗೆ ಹೊಸ ರೂಪ ನೀಡಲಾಗುವುದು. ಈ ಬಾರಿಯ ಬಜೆಟ್ ನಲ್ಲಿ ಅದನ್ನು ಪ್ರಕಟಿಸಲಿದ್ದು, ಮುಂದಿನ ದಿನಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಾಣಂತಿ, ಮಗು ಸಾವಿನ ಸಂಖ್ಯೆ ಪ್ರಕರಣ ಹೆಚ್ಚಿದ ಹಿನ್ನೆಲೆಯಲ್ಲಿ ಅನೇಕ ರೀತಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮುಂದೆ ಮತ್ತಷ್ಟು ಇಳಿಕೆಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular