ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಜೈನ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಅಲ್ಪಸಂಖ್ಯಾತರನ್ನು ಮತ್ತು ಅವರ ಆಸ್ತಿಯನ್ನು ರಕ್ಷಿಸುತ್ತೇವೆ ಎಂದು ಹೇಳಿದ್ದಾರೆ.
ನಿಮಗೆಲ್ಲರಿಗೂ ತೊಂದರೆಯಾಗಿದೆ ಎಂದು ನನಗೆ ಗೊತ್ತು. ನನ್ನ ಮೇಲೆ ನಂಬಿಕೆ ಇಡಿ. ಪಶ್ಚಿಮ ಬಂಗಾಳದಲ್ಲಿ ಏನು ಆಗುವುದಿಲ್ಲ. ಇಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲು ಬಿಡುವುದಿಲ್ಲ. ಮುಸ್ಲಿಮರನ್ನು ‘ಒಡೆದು ಆಳಲು’ ಬಿಡುವುದಿಲ್ಲ. ಬಂಗಾಳದ ಮುಸ್ಲಿಮರು ಚಿಂತಿಸಬೇಕಾಗಿಲ್ಲ. ಬಂಗಾಳದಲ್ಲಿ ನಮ್ಮನ್ನು ವಿಭಜಿಸಿ ಆಳುವ ಯಾವುದೇ ರೀತಿಯ ಘಟನೆ ನಡೆಯುವುದಿಲ್ಲ. ನಮ್ಮಲ್ಲಿ ಶೇ. 33 ರಷ್ಟು ಮುಸ್ಲಿಮರಿದ್ದಾರೆ. ಅವರು ಶತಮಾನಗಳಿಂದ ಇಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ರಕ್ಷಿಸುವುದು ನನ್ನ ಕರ್ತವ್ಯ ಎಂದು ಮಮತಾ ಹೇಳಿದ್ದಾರೆ.