HomeLatest NewsRTE ಕಾಯ್ದೆಗೆ ತಿದ್ದುಪಡಿ: ಇನ್ನು ಕಡ್ಡಾಯವಾಗಿ ಪಾಸಾದರೆ ಮಾತ್ರ ಮುಂದಿನ ತರಗತಿಗೆ ಪ್ರವೇಶ: 5, 8ನೇ...

RTE ಕಾಯ್ದೆಗೆ ತಿದ್ದುಪಡಿ: ಇನ್ನು ಕಡ್ಡಾಯವಾಗಿ ಪಾಸಾದರೆ ಮಾತ್ರ ಮುಂದಿನ ತರಗತಿಗೆ ಪ್ರವೇಶ: 5, 8ನೇ ತರಗತಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಹೊಸ ನಿಯಮ ಜಾರಿ

ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮ -20108ಕ್ಕೆ ತಿದ್ದುಪಡಿ ಮಾಡಿ ಹೊಸ ನಿಯಮಗಳೊಂದಿಗೆ ಕೇಂದ್ರ ಸರ್ಕಾರ ಜಾರಿಗೊಳಿಸಿದೆ.

ಕೇಂದ್ರೀಯ ವಿದ್ಯಾಲಯಗಳ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆದುಕೊಳ್ಳಲು ಕಡ್ಡಾಯವಾಗಿ ತೇರ್ಗಡೆ ಹೊಂದಬೇಕಿದೆ.

ಕೇಂದ್ರ ಜಾರಿಗೊಳಿಸಿದ ಹೊಸ ನಿಯಮದ ಪ್ರಕಾರ ಐದು ಮತ್ತು ಎಂಟನೇ ತರಗತಿ ಉತ್ತೀರ್ಣರಾಗುವುದನ್ನು ಕೇಂದ್ರ ಶಿಕ್ಷಣ ಸಚಿವಾಲಯ 2024ರ ಡಿಸೆಂಬರ್ 16ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಕಡ್ಡಾಯಗೊಳಿಸಲಾಗಿದೆ. 2025- 26 ರಿಂದ ಇದು ಅಧಿಕೃತವಾಗಿ ಜಾರಿಗೆ ಬಂದಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಮಾರ್ಚ್ ನಲ್ಲಿ ವಾರ್ಷಿಕ ಪರೀಕ್ಷೆ ಬರೆಯಲಿರುವ ಐದು ಮತ್ತು ಎಂಟನೇ ತರಗತಿಯ ಮಕ್ಕಳಿಗೆ ಈ ನಿಯಮ ಅನ್ವಯವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ 53 ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ 11,000 ಮಕ್ಕಳು 5 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದಾರೆ. ಪ್ರಾಥಮಿಕ ಹಂತದ 5, ಮಾಧ್ಯಮಿಕ ಹಂತದ 8ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಲು ಈ ನಿಯಮ ಜಾರಿಗೊಳಿಸಲಾಗಿದೆ.

ಮುಖ್ಯ ಪರೀಕ್ಷೆ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಎರಡು ತಿಂಗಳ ಅವಧಿಯೊಳಗೆ ಮರು ಪರೀಕ್ಷೆಗೆ ಅವಕಾಶ ನೀಡಲಿದ್ದು, ಮರು ಪರೀಕ್ಷೆಯಲ್ಲೂ ವಿದ್ಯಾರ್ಥಿಗಳು ಫೇಲಾದಲ್ಲಿ ಹಿಂದಿನ ತರಗತಿಯಲ್ಲಿಯೇ ಓದಬೇಕಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular