ಈ ಆರು ದೇಶಗಳ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ನವದೆಹಲಿ: ಚೀನಾದಲ್ಲಿ ಹೊಸ ಕೋವಿಡ್ -19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವು ಆರು ದೇಶಗಳ ಪ್ರಯಾಣಿಕರಿಗೆ ನಿರ್ಗಮನ ಪೂರ್ವ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಕಡ್ಡಾಯಗೊಳಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಆದೇಶವನ್ನು ಹೊರಡಿಸಿದ್ದು, ಹೊರಡುವ ಮೊದಲು 72 ಗಂಟೆಗಳ ಒಳಗೆ ಪರೀಕ್ಷೆಯನ್ನು ನಡೆಸಬೇಕಾಗುತ್ತದೆ ಎಂದು ಹೇಳಿದೆ.

ಕೆಲವು ದೇಶಗಳಲ್ಲಿ ವಿಶೇಷವಾಗಿ ಚೀನಾ, ಸಿಂಗಪುರ, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್‌ಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಈ ದೇಶಗಳಲ್ಲಿ SARS-CoV-2 ನ ರೂಪಾಂತರಗಳ ಪ್ರಸರಣಕ್ಕೆ ಸಂಬಂಧಿಸಿದ ವರದಿಗಳು ಬಂದಿರುವ ಕಾರಣ, ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಬೇಕು ಮತ್ತು ನವೀಕರಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ಈ ದೇಶಗಳಿಂದ ಎಲ್ಲಾ ಅಂತರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರಿಗೆ ನಿರ್ಗಮನ ಪೂರ್ವ RT-PCR ಪರೀಕ್ಷೆ ಕಡ್ಡಾಯ ಮಾಡಲಾಗಿದೆ. “ಯಾವುದೇ ಭಾರತೀಯ ವಿಮಾನ ನಿಲ್ದಾಣಕ್ಕೆ ಬರುವ ಮೊದಲು ಚೀನಾ, ಸಿಂಗಪುರ್, ಹಾಂಗ್ ಕಾಂಗ್, ದಕ್ಷಿಣ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ ಮೂಲಕ ಪ್ರಯಾಣಿಸುವ ಪ್ರಯಾಣಿಕರಿಗೆ ಅವರ ಮೂಲ ದೇಶಗಳನ್ನು ಲೆಕ್ಕಿಸದೆ ಅನ್ವಯಿಸುತ್ತದೆ” ಎಂದು ಹೇಳಿದೆ.

https://twitter.com/ANI/status/1609866322674081792?ref_src=twsrc%5Etfw%7Ctwcamp%5Etweetembed%7Ctwterm%5E160986

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read