ನವದೆಹಲಿ: ಚೀನಾದಲ್ಲಿ ಹೊಸ ಕೋವಿಡ್ -19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವು ಆರು ದೇಶಗಳ ಪ್ರಯಾಣಿಕರಿಗೆ ನಿರ್ಗಮನ ಪೂರ್ವ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಕಡ್ಡಾಯಗೊಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಆದೇಶವನ್ನು ಹೊರಡಿಸಿದ್ದು, ಹೊರಡುವ ಮೊದಲು 72 ಗಂಟೆಗಳ ಒಳಗೆ ಪರೀಕ್ಷೆಯನ್ನು ನಡೆಸಬೇಕಾಗುತ್ತದೆ ಎಂದು ಹೇಳಿದೆ.
ಕೆಲವು ದೇಶಗಳಲ್ಲಿ ವಿಶೇಷವಾಗಿ ಚೀನಾ, ಸಿಂಗಪುರ, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್‌ಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಈ ದೇಶಗಳಲ್ಲಿ SARS-CoV-2 ನ ರೂಪಾಂತರಗಳ ಪ್ರಸರಣಕ್ಕೆ ಸಂಬಂಧಿಸಿದ ವರದಿಗಳು ಬಂದಿರುವ ಕಾರಣ, ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಬೇಕು ಮತ್ತು ನವೀಕರಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
“ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ಈ ದೇಶಗಳಿಂದ ಎಲ್ಲಾ ಅಂತರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರಿಗೆ ನಿರ್ಗಮನ ಪೂರ್ವ RT-PCR ಪರೀಕ್ಷೆ ಕಡ್ಡಾಯ ಮಾಡಲಾಗಿದೆ. “ಯಾವುದೇ ಭಾರತೀಯ ವಿಮಾನ ನಿಲ್ದಾಣಕ್ಕೆ ಬರುವ ಮೊದಲು ಚೀನಾ, ಸಿಂಗಪುರ್, ಹಾಂಗ್ ಕಾಂಗ್, ದಕ್ಷಿಣ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ ಮೂಲಕ ಪ್ರಯಾಣಿಸುವ ಪ್ರಯಾಣಿಕರಿಗೆ ಅವರ ಮೂಲ ದೇಶಗಳನ್ನು ಲೆಕ್ಕಿಸದೆ ಅನ್ವಯಿಸುತ್ತದೆ” ಎಂದು ಹೇಳಿದೆ.
"Mandatory pre-departure RT-PCR testing (to be conducted within 72 hrs prior to undertaking the journey) introduced for passengers in all international flights from China, Singapore, Hong Kong, South Korea, Thailand and Japan": MoHFW pic.twitter.com/z4AhnljzIT
— ANI (@ANI) January 2, 2023

