BIG NEWS : ‘CM’ ರೇಸ್’ ನಲ್ಲಿರುವ DCM ಡಿ.ಕೆ ಶಿವಕುಮಾರ್ ಗೆ ಪ್ರಾರ್ಥನೆ ವೇಳೆ ಹೂ ಮೂಲಕ ವರ ನೀಡಿದ ಹಾಸನಾಂಬೆ |WATCH VIDEO

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಹಾಸನಾಂಬೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಪ್ರಾರ್ಥನೆ ವೇಳೆ ಹಾಸನಾಂಬೆ ಹೂ ಮೂಲಕ ವರ ನೀಡಿದೆ. ಡಿಸಿಎಂ ಡಿಕೆಶಿ ಪ್ರಾರ್ಥನೆ ಸಲ್ಲಿಸುವಾಗ ಹೂ ಎರಡು ಬಾರಿ ಬಲಕ್ಕೆ ಬಿದ್ದಿದೆ.

ಹಾಸನಾಂಬೆ ದೇವಾಲಯದಲ್ಲಿ ಡಿಕೆ ಶಿವಕುಮಾರ್ ಶತ್ರುಗಳ ಮೇಲೆ ವಿಜಯದ ಸಂಕೇತವಾಗಿ ವಿಶೇಷ ಪೂಜೆ ಮಾಡಿದ್ದಾರೆ. 5 ನಿಮಿಷಗಳ ಕಾಲ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರ ಪಠಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಪ್ರಸಾದ ಬಹಳ ಚೆನ್ನಾಗಿ ಆಗಿದೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಈ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಾಸನಾಂಬೆ ವರ ನೀಡಿತಾ ಎಂಬ ವಿಚಾರ ಚರ್ಚೆ ಆಗುತ್ತಿದೆ.

ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಓಂ ಹಾಸನಪುರ ನಿಲಯೇ ದೇವಿ, ಶಕ್ತಿಸ್ವರೂಪಿಣಿ। ಕಾರುಣ್ಯಮಯಿ ಜಗದಂಬೆ, ಪಾಹಿ ಮಾಂ ಶರಣಾಗತಂ॥ ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ ದೃಶ್ಯಗಳು ಎಂದು ದೇವಾಲಯದ ವೀಡಿಯೋ ಹಂಚಿಕೊಂಡಿದ್ದಾರೆ.

ಹಾಸನದ ಅಧಿದೇವತೆ ಹಾಗೂ ಶಕ್ತಿ ಪೀಠಗಳಲ್ಲಿ ಒಂದಾದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ತಾಯಿ ಹಾಸನಾಂಬೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರ ಜೊತೆಗೆ ಹಲವು ಪವಾಡಗಳನ್ನು ಮಾಡುವ ಮೂಲಕ ಭಕ್ತರ ಹೃದಯಗಳಲ್ಲಿ ವಿಶೇಷ ಸ್ಥಾನ ಪಡೆದಿದ್ದಾಳೆ. ತಾಯಿ ಸನ್ನಿಧಿಯಲ್ಲಿ ನಾಡನ್ನು ಸಮೃದ್ಧವಾಗಿರಿಸು ಎಂದು ಪ್ರಾರ್ಥನೆ ಸಲ್ಲಿಸಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read