ಅಮಿತ್ ಶಾ ಮಹತ್ವದ ಘೋಷಣೆ: ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗು

ಕೊಲ್ಕೊತಾ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಗುಡುಗಿದ್ದಾರೆ.

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಅಮಿತ್ ಶಾ ಬುಧವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಾರೆ. ಬೃಹತ್ ರ್ಯಾಲಿಯಲ್ಲಿ ಭಾಗಿಯಾಗಿದ್ದ ಅವರು ಲೋಕಸಭೆ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪ್ರತಿಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿವೆ. ಆದರೆ, ಕೇಂದ್ರ ಸರ್ಕಾರ ಸಿಎಎ ಕುರಿತು ಸ್ಪಷ್ಟ ನೀತಿಗಳನ್ನು ರೂಪಿಸುವಲ್ಲಿ ನಿರತವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿಯೇ ಸಿದ್ದ. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪ್ರತಿಪಕ್ಷಗಳಿಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read