HomeKarnatakaBIG NEWS: ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಮಿತ್ ಶಾ ಮಹತ್ವದ...

BIG NEWS: ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರಿಂದ ಯಾವುದೇ ನಷ್ಟವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ಅವರಿಗೆ ಮಾತ್ರ ಟಿಕೆಟ್ ಕೈತಪ್ಪಿಲ್ಲ. ಹಲವರಿಗೆ ಟಿಕೆಟ್ ನೀಡಿಲ್ಲ. ಏಕೆ ಟಿಕೆಟ್ ನೀಡುವುದಿಲ್ಲ ಎಂದು ಶೆಟ್ಟರ್ ಅವರಿಗೆ ಹೇಳಿದ್ದೆವು. ಇದನ್ನು ಬಹಿರಂಗಪಡಿಸುವುದಿಲ್ಲ. ಮತದಾರರಿಗೆ ಯಾವ ರೀತಿ ಹೇಳಬೇಕು ಆ ರೀತಿ ವಿಷಯ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ವೋಟ್ ಬ್ಯಾಂಕ್ ಹೊಂದಿದೆ. ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಈ ಬಾರಿ ಜಗದೀಶ್ ಶೆಟ್ಟರ್ ಸೋಲುತ್ತಾರೆ. ಅವರು ಪಕ್ಷ ಬಿಟ್ಟಿದ್ದರಿಂದ ನಷ್ಟವಾಗಿಲ್ಲ. ಟಿಕೆಟ್ ನೀಡದಿರುವುದೇಕೆ ಎಂದು ಅವರಿಗೆ ಹೇಳಿದ್ದೇವೆ. ಎಲ್ಲಾ ವಿಚಾರವೂ ಶೆಟ್ಟರ್ ಅವರಿಗೆ ಗೊತ್ತಿದೆ. ಕಾರ್ಯಕರ್ತರು ಒಂದಾಗಿದ್ದು ಬಿಜೆಪಿ ಗೆಲ್ಲಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular