ನವದೆಹಲಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲಿಯೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.
ತುರ್ತು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ನೀವೇ ನಿರ್ಧಾರಗಳನ್ನು ಕೈಗೊಳ್ಳಿ ಎಂದು ಕೇಂದ್ರ ಗೃಹ ಸಚಿವರು ಎಲ್ಲಾ ರಾಜ್ಯಗಳಿಗೂ ಪತ್ರ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಯಾವುದೇ ಪರಿಸ್ಥಿತಿಗಳನ್ನು ಎದುರಿಸಲು ಸನ್ನದ್ದವಾಗಿರಬೇಕು. ತುರ್ತು ಸಂದರ್ಭ ಎದುರಾದರೆ ನೀವೇ ಎದುರಿಸಬೇಕಾಗುತ್ತದೆ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.