ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರ ಕಣಕ್ಕೆ ಅಮಿತ್ ಶಾ ಎಂಟ್ರಿ; ಇಂದು ಬೃಹತ್ ರೋಡ್ ಶೋ

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇಂದಿನಿಂದ ಪ್ರಚಾರ ಭರಾಟೆ ಜೋರಾಗಿರಲಿದೆ. ಬಿಜೆಪಿ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ಕೆ ಧುಮುಕಲಿದ್ದಾರೆ.

ಅಮಿತ್ ಶಾ ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳ ಬಗ್ಗೆಯೂ ಪರಿಶೀಲನೆ ನಡೆಸಲಿದ್ದಾರೆ.

ಮಾರ್ಚ್ 29 ರಂದು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ರಾಜ್ಯಕ್ಕೆ ಅಮಿತ್ ಶಾ ಅವರ ಮೊದಲ ಭೇಟಿಯಾಗಿದೆ.

ಅವರ ಕಾರ್ಯಕ್ರಮಗಳ ವೇಳಾಪಟ್ಟಿಯ ಪ್ರಕಾರ, ಅಮಿತ್ ಶಾ ಮಧ್ಯಾಹ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲ್ಲೂಕು ಕೇಂದ್ರ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಚುನಾವಣಾ ಸಿದ್ಧತೆಗಳ ಕುರಿತು ಪಕ್ಷದ ಹಿರಿಯ ಪದಾಧಿಕಾರಿಗಳೊಂದಿಗೆ ಸಂಜೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಶನಿವಾರ, ಅವರು ಹೊಸದಿಲ್ಲಿಗೆ ಹಿಂತಿರುಗುವ ಮೊದಲು ಖಾಸಗಿ ಸುದ್ದಿ ವಾಹಿನಿಯೊಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ದೇವನಹಳ್ಳಿಯಲ್ಲಿ ಕೇಂದ್ರ ಸಚಿವರು ಬಿಜೆಪಿಯ ಪಿಳ್ಳ ಮುನಿಶಾಮಪ್ಪ ಅವರ ಪರ ಪ್ರಚಾರ ನಡೆಸಲಿದ್ದಾರೆ. ಪಿಳ್ಳ ಮುನಿಶಾಮಪ್ಪ , ಜೆಡಿಎಸ್‌ನ ಹಾಲಿ ಶಾಸಕ ಎಲ್‌ಎನ್‌ ನಾರಾಯಣಸ್ವಾಮಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕೆ ಎಚ್‌ ಮುನಿಯಪ್ಪ ವಿರುದ್ಧ ಕಣಕ್ಕಿಳಿದಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮುನಿಯಪ್ಪ ಚೊಚ್ಚಲ ಬಾರಿಗೆ ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read