ಬಿಗ್ ಬಿ ಅಮಿತಾಬ್ ಬಚ್ಚನ್ ಒಳಗಾದ ಶಸ್ತ್ರಚಿಕಿತ್ಸೆ ʼಆಂಜಿಯೋಪ್ಲ್ಯಾಸ್ಟಿʼ ಬಗ್ಗೆ ಇಲ್ಲಿದೆ ಮಾಹಿತಿ

ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಶುಕ್ರವಾರ ಬೆಳಿಗ್ಗೆ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ. ನಂತ್ರ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಅವರು, ತಾವು ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ. ಆಂಜಿಯೋಪ್ಲ್ಯಾಸ್ಟಿ ಎಂದರೇನು, ಯಾವ ರೋಗಿಗೆ ಈ ಚಿಕಿತ್ಸೆ ಅಗತ್ಯವಿರುತ್ತದೆ ಎಂಬುದನ್ನು ಪ್ರತಿಯೊಬ್ಬರು ತಿಳಿದಿರಬೇಕು.

ಆಂಜಿಯೋಪ್ಲ್ಯಾಸ್ಟಿ ಒಂದು ಶಸ್ತ್ರಚಿಕಿತ್ಸೆಯಾಗಿದೆ. ಸರಳ ಭಾಷೆಯಲ್ಲಿ ಹೇಳಬೇಕು ಅಂದ್ರೆ ಇದು ಹೃದಯ ಶಸ್ತ್ರಚಿಕಿತ್ಸೆ. ಇದರಲ್ಲಿ ಹೃದಯ ಸ್ನಾಯುಗಳಿಗೆ ರಕ್ತವನ್ನು ಪೂರೈಸುವ ರಕ್ತನಾಳಗಳು ತೆರೆದುಕೊಳ್ಳುತ್ತವೆ. ಈ ರಕ್ತನಾಳಗಳನ್ನು ಪರಿಧಮನಿಯ ಅಪಧಮನಿಗಳು ಎಂದೂ ಕರೆಯುತ್ತಾರೆ. ಹೃದಯಾಘಾತ ಅಥವಾ ಪಾರ್ಶ್ವವಾಯು ನಂತರದ ಚಿಕಿತ್ಸೆಗಾಗಿ ಆಂಜಿಯೋಪ್ಲ್ಯಾಸ್ಟಿಯ ಸಹಾಯವನ್ನು ತೆಗೆದುಕೊಳ್ಳುತ್ತಾರೆ.

ಅಪಧಮನಿಗಳು ಗಟ್ಟಿಯಾಗಿದ್ದರೆ ಆಂಜಿಯೋಪ್ಲಾಸ್ಟಿಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡುತ್ತಾರೆ. ಹೃದಯಾಘಾತದ ಅಪಾಯ ಕಡಿಮೆ ಮಾಡುವ ಶಸ್ತ್ರಚಿಕಿತ್ಸೆ ಇದಾಗಿದೆ. ಮಧುಮೇಹ ಅಪಾಯಕಾರಿ ಮಟ್ಟ ತಲುಪಿದಾಗಲೂ ಇದನ್ನು ಮಾಡಲಾಗುತ್ತದೆ. ಎದೆ ನೋವನ್ನು ವೈದ್ಯಕೀಯ ಭಾಷೆಯಲ್ಲಿ ಆಂಜಿನಾ ಎಂದು ಕರೆಯಲಾಗುತ್ತದೆ. ಹೃದಯಕ್ಕೆ ಸಾಕಷ್ಟು ರಕ್ತ ಪೂರೈಕೆಯಿಲ್ಲದಿದ್ದಾಗ ಆಂಜಿನಾ ಸಂಭವಿಸುತ್ತದೆ. ಈ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಈ ಶಸ್ತ್ರಚಿಕಿತ್ಸೆಯ ಸಲಹೆ ನೀಡಲಾಗುತ್ತದೆ.

ಈ ಶಸ್ತ್ರಚಿಕಿತ್ಸೆಯಲ್ಲಿ ಕೆಲವರಿಗೆ ಸ್ಟಂಟ್‌ ಅಳವಡಿಕೆ ಮಾಡಲಾಗುತ್ತದೆ. ಮತ್ತೆ ಕೆಲವರಿಗೆ ಇದ್ರ ಅಗತ್ಯ ಇರೋದಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ವೆಚ್ಚದಲ್ಲಿ ಬದಲಾವಣೆ ಕಾಣಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಇದರ ವೆಚ್ಚ 20-30 ಸಾವಿರ ರೂಪಾಯಿ ಆದ್ರೆ ಖಾಸಗಿ ಆಸ್ಪತ್ರೆಗಳಲ್ಲಿ 2 ರಿಂದ 3 ಲಕ್ಷ ರೂಪಾಯಿ ಚಾರ್ಜ್‌ ಮಾಡಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read