HomeKarnatakaBREAKING: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಗೆ ಆಕ್ರೋಶ: ಇಂದು ಗದಗ-ಬೆಟಗೇರಿ ಸಂಪೂರ್ಣ ಬಂದ್: ಜಿಲ್ಲಾ...

BREAKING: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಗೆ ಆಕ್ರೋಶ: ಇಂದು ಗದಗ-ಬೆಟಗೇರಿ ಸಂಪೂರ್ಣ ಬಂದ್: ಜಿಲ್ಲಾ ಕಾಂಗ್ರೆಸ್ ಬೆಂಬಲ

ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ ನಗರ ಬಂದ್ ಗೆ ಕರೆ ನೀಡಲಾಗಿದೆ.

ಸಂಸತ್ ನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಗದಗ –ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದೆ

ವಿವಿಧ ದಲಿತಪರ ಸಂಘಟನೆಗಳಿಂದ ಗದಗ -ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಬೆಂಬಲ ಸೂಚಿಸಿದೆ. ರೋಣಾ ಶಾಸಕ ಜೆ.ಎಸ್. ಪಾಟೀಲ್ ಬಂದ್ ಬೆಂಬಲಿಸಿ ಪತ್ರ ಬರೆದಿದ್ದಾರೆ. ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು ಕೂಡ ಗದಗ -ಬೆಟಗೇರಿ ಅವಳಿ ನಗರ ಬಂದ್ ಗೆ ಬೆಂಬಲ ನೀಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸುವಂತೆ ಕೋರಲಾಗಿದೆ. ಬಂದ್ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular