BIG NEWS: ಅಮಿತ್ ಶಾ ಕಾರ್ಯಕ್ರಮದಿಂದ ದೂರ ಉಳಿದ ಹೆಚ್.ಡಿ.ಕೆ; ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದು, ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅಮಿತ್ ಶಾ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಅಮಿತ್ ಶಾ ಹಾಗೂ ಕುಮಾರಸ್ವಾಮಿ ಭೇಟಿ ರದ್ದಾಗಿದೆ. ಅಮಿತ್ ಶಾ ಕಾರ್ಯಕ್ರಮದಿಂದ ಹೆಚ್.ಡಿ.ಕೆ ದೂರ ಉಳಿದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ.ಕುಮಾರಸ್ವಾಮಿ, ಅಮಿತ್ ಶಾ ಅವರನ್ನು ಭೇಟಿಯಾಗುತ್ತಿಲ್ಲ. ಕುಮಾರಸ್ವಾಮಿಯವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದೆ. ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿ ಭೇಟಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅನಾರೋಗ್ಯ ಕಾರಣಕ್ಕೆ ಭೇಟಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.

ಇದೇ ವೇಳೆ ತಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮುಖಂಡರು ಹೇಳಿದ್ದಾರೆ. ನನ್ನ ಗಮನ ಎಲ್ಲಾ 28 ಕ್ಷೇತ್ರಗಳತ್ತ ಇರುತ್ತದೆ. ಆದರೆ ಮಂಡ್ಯ ಟಿಕೆಟ್ ಆಕಾಂಕ್ಷಿ ನಾನಲ್ಲ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read