ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ 12 ಜನರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಕೃತ್ಯದ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹಾಗೂ ಎನ್ ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮತ್ತೊಂದು ಸುತ್ತಿನ ಭದ್ರತಾ ಪರಿಶೀಲನೆ ಸಭೆ ನಡೆಸಿದ್ದಾರೆ. ದೆಹಲಿಯ ಕರ್ತವ್ಯ ಭವನದಲ್ಲಿರುವ ಗೃಹ ಸಚಿವಾಯದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದರತಾ ಪಡೆಯ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದೆ.
