HomeKarnatakaBIG NEWS: ಗೃಹ ಸಚಿವ ಅಮಿತ್ ಶಾ ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ

BIG NEWS: ಗೃಹ ಸಚಿವ ಅಮಿತ್ ಶಾ ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ

ಮೈಸೂರು: ಕೇಂದ್ರ ಗೃಹ ಸಚಿವ ಬಿಜೆಪಿ ಚಾಣಾಕ್ಯ ಅಮಿತ್ ಶಾ ಇಂದು ಬೆಳಿಗ್ಗೆ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ನೀಡಿದ್ದಾರೆ.

ಅಮಿತ್ ಶಾ ಆಗಮನಕ್ಕೂ ಮುನ್ನ ಅವರು ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಮೈಸೂರು-ನಂಜನಗೂಡು ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್ ಗೆ ಡಿಕ್ಕಿಯಾಗಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಪೊಲೀಸರು ಆಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular