HomeIndiaತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ವಿಶೇಷ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ವಿಶೇಷ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ತಿರುಪತಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಿರುಪತಿಗೆ ಭೇಟಿ ನೀಡಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವೆಂಕಟೇಶ್ವರ ಸ್ವಾಮಿಯ ಸೇವೆಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.

ದೇವಾಲಯದ ಮುಖ್ಯದ್ವಾರಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ ಅವರಿಗೆ ಟಿಟಿಡಿ ಇಒ ಧರ್ಮಾ ರೆಡ್ಡಿ ಹಾಗೂ ದೇವಾಲಯದ ಪ್ರಧಾನ ಅರ್ಚಕರು ಅದ್ಧೂರಿ ಸ್ವಾಗತ ಕೋರಿದರು. ದೇವಸ್ಥಾನದಲ್ಲಿ ವೆಂಕಟೇಶ್ವರ ಸ್ವಾಮಿಯ ವಿಶೇಷ ದರ್ಶನ ಪಡೆದರು. ದರ್ಶನದ ಬಳಿಕ ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರು ವೇದಾಶೀರ್ವಾದ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular