ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 7ರಂದು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ. ಅವರ ಭೇಟಿಯ ವೇಳೆ ಪಕ್ಷದ ಯಾವುದೇ ಕಾರ್ಯಕ್ರಮಗಳು ನಿಗದಿಯಾಗಿಲ್ಲ.
ತಮಿಳುನಾಡಿನ ರಾಣಿಪೇಟೆಯಿಂದ ಬಿಎಸ್ಎಫ್ ವಿಮಾನದಲ್ಲಿ ಹೊರಟು ಶುಕ್ರವಾರ ಬೆಳಗ್ಗೆ 11:30 ಕ್ಕೆ ಹೆಚ್ಎಲ್ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಇಳಿಯಲಿದ್ದಾರೆ. ರಸ್ತೆ ಮಾರ್ಗವಾಗಿ ತೆರಳಿ ಜಯನಗರದಲ್ಲಿ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಇದೇ ಸ್ಥಳದಲ್ಲಿ ಅರ್ಧ ಗಂಟೆ ಮಧ್ಯಾಹ್ನದ ಭೋಜನಕ್ಕೆ ಮೀಸಲಿಡಲಾಗಿದೆ. ನಂತ ರಸ್ತೆ ಮಾರ್ಗವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿರುವ ಅವರು ಮಧ್ಯಾಹ್ನ 2:30ಕ್ಕೆ ಅಹಮದಾಬಾದ್ ಗೆ ಪ್ರಯಾಣ ಬೆಳೆಸಲಿದ್ದಾರೆ.
ಅಮಿತ್ ಶಾ ಬೆಂಗಳೂರಿಗೆ ಆಗಮಿಸುವ ವೇಳೆ ಅವರ ಸ್ವಾಗತ, ಬೀಳ್ಕುಡುವಾಗ ವಿಮಾನ ನಿಲ್ದಾಣದಲ್ಲಿ ಬಿಜೆಪಿಯ 15 ಮುಖಂಡರು ಹಾಜರಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಪಕ್ಷದ ನಾಯಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.