HomeKarnatakaಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 12,000 ರೂ. ವರೆಗೆ ಸಹಾಯಧನ ಪರಿಷ್ಕರಣೆ

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 12,000 ರೂ. ವರೆಗೆ ಸಹಾಯಧನ ಪರಿಷ್ಕರಣೆ

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಾರ್ಷಿಕ ಶೈಕ್ಷಣಿಕ ಸಹಾಯಧನ ಮೊತ್ತ ಪರಿಷ್ಕರಿಸಲಾಗಿದೆ.

ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಿಂದ 2023 -24 ನೇ ಸಾಲಿನಿಂದ ಅನ್ವಯವಾಗುವಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಪರಿಷ್ಕರಿಸಿದೆ.

ಒಂದರಿಂದ ಐದನೇ ತರಗತಿ ಮಕ್ಕಳಿಗೆ ವಾರ್ಷಿಕ 1,800 ರೂ. ನೀಡಲಾಗುವುದು. ಆರರಿಂದ ಎಂಟನೇ ತರಗತಿ ಮಕ್ಕಳಿಗೆ 2400 ರೂ., 9 ಮತ್ತು 10ನೇ ತರಗತಿ ಮಕ್ಕಳಿಗೆ 3000 ರೂ. ನೀಡಲಾಗುತ್ತದೆ. ಪಿಯುಸಿ ವಿದ್ಯಾರ್ಥಿಗಳಿಗೆ ಮಕ್ಕಳಿಗೆ 4000 ರೂ. ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಲಿಟೆಕ್ನಿಕ್, ಐಟಿಐ ವಿದ್ಯಾರ್ಥಿಗಳಿಗೆ 4600 ರೂ.,  ಬಿಎಡ್ ವಿದ್ಯಾರ್ಥಿಗಳಿಗೆ 6000 ರೂ., ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ಬಿಎಸ್ಸಿ ನರ್ಸಿಂಗ್, ಪ್ಯಾರಾ ಮೆಡಿಕಲ್, ಎಂಟೆಕ್, ಎಲ್.ಎಲ್.ಬಿ. ವಿದ್ಯಾರ್ಥಿಗಳಿಗೆ 10,000 ರೂ. ನೀಡಲಾಗುವುದು.

ಎಂಡಿ ಮೆಡಿಕಲ್ 12,000 ರೂ., ಎಂಫಿಲ್, ಐಐಟಿ, ಪಿಹೆಚ್‌ಡಿ, ಐಐಎಂ ವಿದ್ಯಾರ್ಥಿಗಳಿಗೆ 11000 ರೂ.ಗಳಿಗೆ ಶೈಕ್ಷಣಿಕ ಸಹಾಯಧನ ಪರಿಷ್ಕರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular