SHOCKING : ‘LIVE’ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಕೃಷಿ ತಜ್ಞ..!

ಕೇರಳದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಲೈವ್ ಟಿವಿ ಕಾರ್ಯಕ್ರಮದ ಸಮಯದಲ್ಲಿ, ಕೃಷಿ ತಜ್ಞರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ಲೈವ್ ಕಾರ್ಯಕ್ರಮ ಕೊಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 59 ವರ್ಷದ ಡಾ.ಅನಿ ಎಸ್ ದಾಸ್ ಅವರು ಕೇರಳ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕರಾಗಿದ್ದರು. ದೂರದರ್ಶನದಲ್ಲಿ ಪ್ರಸಾರವಾಗುವ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಅವರು ಆಗಾಗ್ಗೆ ತಜ್ಞರಾಗಿ ಭಾಗವಹಿಸುತ್ತಿದ್ದರು.

ಶುಕ್ರವಾರ ಸಂಜೆ 6.30ಕ್ಕೆ ದೂರದರ್ಶನದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಚರ್ಚೆ ನಡೆಯುತ್ತಿದ್ದಾಗ, ಡಾ. ಅನಿ ಎಸ್ ದಾಸ್ ಇದ್ದಕ್ಕಿದ್ದಂತೆ ಬಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ ಅಲ್ಲಿ ಚಿಕಿತ್ಸೆ ಫಲಿಸದೇ ಅವರು ನಿಧನರಾದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read