HomeLatest Newsದಕ್ಷ ಆಡಳಿತಗಾರ ಜಾಲಪ್ಪ ಹೆಜ್ಜೆ ಗುರುತು ದಾಖಲಿಸಿ ಕೃಷಿಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ್ದರು: ಸಿದ್ಧರಾಮಯ್ಯ

ದಕ್ಷ ಆಡಳಿತಗಾರ ಜಾಲಪ್ಪ ಹೆಜ್ಜೆ ಗುರುತು ದಾಖಲಿಸಿ ಕೃಷಿಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ್ದರು: ಸಿದ್ಧರಾಮಯ್ಯ

ಆರ್.ಎಲ್.  ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಇಂದು ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, “ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ” ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ, ರೈತರಿಗೆ, ಕೃಷಿಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ್ದರು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪನವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದ್ದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 40 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿರುವುದು ಶ್ಲಾಘನೀಯ ಎಂದು ಹೇಳಿದ್ದಾರೆ.

ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌. ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನಾನು ಮತ್ತೆ ಜೆ.ಹೆಚ್.ಪಟೇಲರು ಇಬ್ಬರ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದರು ಎಂದರು.

ನಾನು ಮೊದಲ ಬಾರಿ ಹಣಕಾಸು ಸಚಿವನಾಗುವಾಗಲೂ ಜಾಲಪ್ಪನವರ ಪ್ರಯತ್ನ‌ ಇದೆ. ನಾನು ಕಂದಾಯ ಸಚಿವನಾಗಬೇಕು ಎಂದುಕೊಂಡಿದ್ದೆ. ಆದರೆ, ನಾನು ಹಣಕಾಸು ಸಚಿವ ಆಗಲೇಬೇಕು ಎಂದು ಸೂಚಿಸಿದರು. ಅವರ ಕಾರಣದಿಂದ ನಾನು ಇಂದು ಹದಿನಾರು ಬಜೆಟ್ ಗಳನ್ನು ಮಂಡಿಸುವಂತಾಯಿತು ಎಂದರು.

ಇಂದು ನಾನು ರಾಜಕೀಯವಾಗಿ ಈ ಮಟ್ಟದ ಏಳಿಗೆ ಆಗಿದ್ದರೆ ಅದರಲ್ಲಿ ಜಾಲಪ್ಪನವರ ಪಾತ್ರ ದೊಡ್ಡದಿದೆ. ಅವರ ಋಣವನ್ನು ಮರೆಯಲು ಸಾಧ್ಯವೇ ಇಲ್ಲ. ಅತ್ಯಂತ ಹೃದಯವಂತರಾಗಿದ್ದ ಜಾಲಪ್ಪನವರು ಆತಿಥ್ಯದಲ್ಲೂ ಎತ್ತಿದ ಕೈ. ತುಪ್ಪದ ದೋಸೆ ಮಾಡಿ ಸ್ವತಃ ಬಡಿಸಿದ್ದರು. ಸಾಮಾಜಿಕ ನ್ಯಾಯದ ಪರವಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿ ಇಟ್ಟಿದ್ದರು. ಅತ್ಯಂತ ಧೈರ್ಯವಂತರಾಗಿದ್ದ ಜಾಲಪ್ಪ ಅವರು ಸತ್ಯ ಹೇಳುವಾಗ ಮುಲಾಜಿಲ್ಲದೆ ಎದೆಗಾರಿಕೆ ಪ್ರದರ್ಶಿಸುತ್ತಿದ್ದರು ಎಂದರು.

ಸಚಿವರಾದ ಕೆ.ಹೆಚ್. ಮುನಿಯಪ್ಪ, ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ ಇತರರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular