HomeKarnatakaಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ; ಬಿಸಿಲಿನ ಶಾಖದಿಂದ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಸಲಹೆ

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ; ಬಿಸಿಲಿನ ಶಾಖದಿಂದ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಸಲಹೆ

ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳನ್ನು ನೀಡಿದೆ.

ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುಲು ಈ ಕೆಳಕಂಡ ಸಲಹೆಗಳನ್ನು ನೀಡಿದೆ.
ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಿ.

ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

• ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ. ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಕೊಡಬೇಕು.

• ಬೆಳಿಗ್ಗೆ 11 ರಿಂದ ಸಂಜೆ 04 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.
ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ರೂಕೋಸ್ / (ಓ.ಆರ್.ಎಸ್.) ನಂತಹ ದ್ರವ
ಪದಾರ್ಥ ಗಳನ್ನು ಹೆಚ್ಚು ಉಪಯೋಗಿಸಿ.

ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ, (use window, shades, fanning and cross ventilation).

ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ, ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಫ್ರಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು  ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್ಗಳ ಮಧ್ಯ ಇಡಬಹುದು.

ಹೀಟ್ ವೇವ್ ಸ್ಟೋಕ್ ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.

• ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು/ ಓ.ಆರ್.ಎಸ್ /ಮಜ್ಜಿಗೆಯಂತಹ ಪಾನೀಯಗಳನ್ನು ಬಳಸಬಹುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular