ಬೆಂಗಳೂರು : ನಾಳೆ ಬುಧವಾರ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ (Karnataka Cabinet Meeting) ನಿಗದಿಯಾಗಿದೆ.
ಬುಧವಾರ ಬೆಳಗ್ಗೆ 11:30ಕ್ಕೆ ಸಚಿವ ಸಂಪುಟದ ವಿಶೇಷ ತುರ್ತು ಸಭೆಯನ್ನು ವಿಧಾನಸೌಧದ ಸಚಿವ ಸಂಪುಟದ ಸಭಾಮಂದಿರದಲ್ಲಿ ಕರೆಯಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ “ವಿಕಸಿತ ಭಾರತ ರೋಜಗಾರ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ (VB G RAM G (Gramin) Act)” ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಸುತ್ತೋಲೆ ಹೊರಡಿಸಿದ್ದಾರೆ.


