HomeKarnatakaBIG NEWS : ಇಂದು ಸಂಜೆ 4 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ 'ಸಚಿವ ಸಂಪುಟ...

BIG NEWS : ಇಂದು ಸಂಜೆ 4 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಆಗಸ್ಟ್ 19 ರಂದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಆಗಸ್ಟ್ 19 ರಂದು ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಂಜೆ 4 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸಭೆಯನ್ನು ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಹಲವು ಯೋಜನೆಗಳ ಅನುಷ್ಟಾನ ಹಾಗೂ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಸಂಬಂಧ ಸರ್ಕಾರ ಮಹತ್ವದ ಚರ್ಚೆ ನಡೆಸಲಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular