BREAKING : ರಾಜ್ಯ ಸರ್ಕಾರದಿಂದ ‘ಇ ಸ್ವತ್ತು ಕಾರ್ಯನಿರ್ವಾಹಣಾ ಸಮಿತಿ’ ರಚನೆ ಮಾಡಿ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಇ ಸ್ವತ್ತು ಕಾರ್ಯನಿರ್ವಾಹಣಾ ಸಮಿತಿ ರಚನೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಮೇಲೆ ಓದಲಾದ ಕ್ರಮ ಸಂಖ್ಯೆ (1) ಮತ್ತು (2) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006 ರ ನಿಯಮ 28 ಮತ್ತು 30 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (3) ರ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ: 25.03.2025 ರಂದು ನಡೆದ ಸಭೆಯ ಸೂಚನೆಯಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ವರದಿಯನ್ನು ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ. ಇವರ ಅಧ್ಯಕ್ಷತೆಯಲ್ಲಿನ ಇ-ಸ್ವತ್ತು ಸಲಹಾ ಸಮಿತಿಗೆ ಸಲ್ಲಿಸಲು ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲು ಸರ್ಕಾರವು ನಿರ್ಣಯಿಸಿದೆ. ಅದರಂತೆ ಈ ಕೆಳಕಂಡ ಆದೇಶ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಲು ನಿರ್ದೇಶಕರು (ಪಂ.ರಾಜ್) ರವರ ಅಧ್ಯಕ್ಷತೆಯಲ್ಲಿ ಈ ಕೆಳಕಂಡ ಸಮಿತಿ ರಚನೆ ಮಾಡಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read