HomeKarnatakaBIG NEWS: ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳತನ; ಬಿಜೆಪಿ ಮುಖಂಡನ ಸಹೋದರ ಅರೆಸ್ಟ್

BIG NEWS: ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳತನ; ಬಿಜೆಪಿ ಮುಖಂಡನ ಸಹೋದರ ಅರೆಸ್ಟ್

ಯಾದಗಿರಿ: ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ.

ರಾಜು ರಾಠೋಡ್ ಬಂಧಿತ ಆರೋಪಿ. ಯಾದಗಿರಿಯಲ್ಲಿ ಕೆಲ ದಿನಗಳ ಹಿಂದೆ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣ ಬಯಲಿಗೆ ಬಂದಿತ್ತು. ಇದೀಗ ಇದರಲ್ಲಿ ಬಿಜೆಪಿ ಮುಖಂಡನ ಸಹೋದರನೇ ಪ್ರಮುಖ ಆರೋಪಿ ಎಂದು ತಿಳಿದುಬಂದಿದೆ.

ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಗೆ ಸೇರಿದ ಶ್ರೀಲಕ್ಷ್ಮೀ ತಿಮ್ಮಪ್ಪ ರೈಸ್ ಮಿಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಅನ್ನಭಾಗ್ಯ ಯೋಜನೆಯ 550 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ. ಅಕ್ಕಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿ ರಾಜು ರಾಠೋಡ್ ನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular