BIG NEWS: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಾಲಪದಲ್ಲಿ ಉತ್ತರ ನೀಡಿದ ಸಚಿವರು, ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ದೈನಂದಿನ ಚಟುವಟಿಕೆಗಳಿಗೆ ಆಡಚಣೆಯಾಗದಂತೆ ಹತ್ತಿರದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಗೆ ಪ್ರಭಾರ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಕ್ರಮವಹಿಸಲಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿ ಸಲ್ಲಿಸಲು ರಾಜ್ಯಾದ್ಯಂತ ಅಭ್ಯರ್ಥಿಗಳಿಗೆ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅಪೂರ್ಣಗೊಂಡ ಅರ್ಜಿಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ನೀಡಲಾಗಿರುತ್ತದೆ. ಈ ಕುರಿತಂತೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೂ ಕಾಲಕಾಲಕ್ಕೆ ನಿರ್ದೇಶನ ನೀಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಚಾಲ್ತಿಯಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿ ಪ್ರಕ್ರಿಯೆಯಲ್ಲಿ ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸುವ ಬದಲಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read