BIG NEWS: ಆನಂದ್ ಗುರೂಜಿಗೆ ಬ್ಲ್ಯಾಕ್ ಮೇಲ್, ಜೀವಬೆದರಿಕೆ: ಇಬ್ಬರ ವಿರುದ್ಧ FIR ದಾಖಲು

ಬೆಂಗಳೂರು: ಆನಂದ್ ಗುರೂಜಿ ಅವರಿಗೆ ಹಣಕ್ಕೆ ಬೇಡಿಕೆ ಇಟ್ಟು ಜೀವಬೆದರಿಕೆ ಹಾಗೂ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಆನಂದ್ ಗುರೂಜಿ ದೂರು ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ್ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಆನ್ಂದ್ ಗುರೂಜಿ ವಿಡಿಯೋ ಹಾಗೂ ಜಮೀನು ಖರೀದಿ ಸಂಬಂಧ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ಆದಾರೂ ಈ ಪ್ರಕರಣದ ವಿಚಾರವಾಗಿ ಇಬ್ಬರೂ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಆನಂದ್ ಗುರೂಜಿ ಅವರ ಕಾರು ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರಂತೆ. ಈ ಬಗ್ಗೆ ಆನಂದ್ ಗುರೂಜಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read