HomeEntertainmentಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಕೆವಾಡಿಯಾ: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.

ಗುಜರಾತ್ ನ ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಅನಂತ್‌ ನಾಗ್‌ ಅವರಿಗೆ 2024ನೇ ಸಾಲಿನ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ ಅನಂತ್ ನಾಗ್ ಅವರಿಗೆ ಇಡೀ ಸಭಾಂಗಣವೇ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿತು.

ಭಾರತೀಯ ಸಿನಿಮಾದ ಪಿತಾಮಹ ಎಂದೇ ಖ್ಯಾತಿ ಪಡೆದಿದ್ದ ದಾದಾ ಸಾಹೇಬ್‌ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಚಿತ್ರರಂಗದಲ್ಲಿ ಅದ್ವಿತೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಅನಂತ್ ನಾಗ್ ಅವರು 5 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದೆ. 300ಕ್ಕೂ ಹೆಚ್ಚು ಚಿತ್ರಗಳಲಿ ಅಭಿನಯಿಸಿರುವ ಅನಂತ್ ನಾಗ್ ಅವರು 5 ಫಿಲ್ಮ್ ಫೇರ್ ಪ್ರಶಸ್ತಿ, 5 ಕನ್ನಡ ಚಲನಚಿತ್ರ ಪ್ರಶಸ್ತಿ, 2025ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಟ ಅನಂತ್ ನಾಗ್, ಬೆಂಗಳೂರು ನನ್ನ ಕರ್ಮಭೂಮಿ. 5 ದಶಕಗಳಿಂದ ನಾನು ಚಿತ್ರರಂಗದಲ್ಲಿ ಇದ್ದೇನೆ ಎಂದು ತಿಳಿಸಿದರು.

ಕೆಪಿಎಸ್ ಸಿ ಮುಚ್ಚುವ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ)ದಲ್ಲಿ ಹಗರಣಗಳು ಹೆಚ್ಚುತ್ತಿರುವುದರಿಂದ ಇದನ್ನು ರದ್ದು ಮಾಡಬೇಕು ಎಂಬ ಒತ್ತಾಯಗಳೂ ಕೇಳಿಬರುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಹೇಳಿದರು.

ಕೆಪಿಎಸ್ ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಭ್ರಷ್ಟಾಚಾರದ ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರುತ್ತದೆ ಎಂದರು.

ಕೆಪಿಎಸ್ ಸಿ ಪಶುವೈದ್ಯಾಧಿಕಾರಿಘಳ ನೇಮಕಾತಿ ಅಕ್ರಮದ ತನಿಖೆಗೆ ಹೈಕೋರ್ಟ್ ಎಸ್ ಐಟಿ ರಚನೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ. ಇಡಿ ಕೂಡ ತನಿಖೆ ಮಾಡುತ್ತಿದೆ. ಆದರೆ, ನಮ್ಮ ಪೊಲೀಸ್ ಇಲಾಖೆಯೂ ತನಿಖೆಯನ್ನು ಬಹಳ ಚೆನ್ನಾಗಿ ನಡೆಸುತ್ತಿದೆ. ನ್ಯಾಯಾಲಯ ಅಗತ್ಯವಿದ್ದರೆ ನಮ್ಮ ಪೊಲೀಸ್ ಇಲಾಖೆಯ ತನಿಖೆಯ ವೈಖರಿಯ ಉಸ್ತುವಾರಿ ನೋಡಬಹುದಿತ್ತು. ನ್ಯಾಯಾಲಯ ಎಸ್ ಐಟಿ ತನಿಖೆಗೆ ನಿರ್ದೇಶಿಸಿರುವುದು ಸರಿ. ಆದರೆ, ತನಿಖಾಧಿಕಾರಿಗಳ ನೇಮಕದ ಸ್ವಾತಂತ್ರ್ಯವನ್ನು ರಾಜ್ಯಸರ್ಕಾರಕ್ಕೆ ಕೊಡಬೇಕಿತ್ತು. ಈ ಬಗ್ಗೆ ದೆಹಲಿ, ಬೇರೆ ಬೇರೆ ರಾಜ್ಯಗಳಿಂದ ನಮಗೆ ಕರೆ ಬಂದಿತ್ತು. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇನೆ ಎಂದು ಹೇಳಿದರು.

ನಮಗೆ ಮಕ್ಕಳ ಭವಿಷ್ಯ ಮುಖ್ಯ. ಇದೇ ಕಾರಣಕ್ಕೆ ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ ಕೆಪಿಎಸ್ ಸಿಯಲ್ಲಿದ್ದ ಸದಸ್ಯರ ಸಂಖ್ಯೆಯನ್ನು ಕಡಿತಗೊಳಿಸಿದ್ದರು. ನಾವು ನಂಬಿಕೆ ಇಟ್ಟು, ಪಾರದರ್ಶಕವಾಗಿ ಆಯ್ಕೆ ಮಾಡಿ ಅಧಿಕಾರಿಗಳನ್ನು ಕಳುಹಿಸಿದರೆ ಅವರೂ ಹೀಗೆ ಮಾಡುತ್ತಾರೆ ಎಂದರು.

ನಾನು ಇಂಧನ ಸಚಿವನಾಗಿದ್ದಾಗ 22 ಸಾವಿರ ಮಂದಿ ಲೈನ್ ಮ್ಯಾನ್, ಎಂಜಿನಿಯರ್ ಗಳ ಹುದ್ದೆ ತುಂಬಿದ್ದೇನೆ. ಬಹಳ ಜಾಗೃತನಾಗಿ ಈ ಕೆಲಸ ಮಾಡಿದ್ದೇನೆ. ಅದಕ್ಕೂ ಮೊದಲು ಖಾಲಿ ಪೇಪರ್ ನಲ್ಲಿ ಬರೆಸುವ ಭ್ರಷ್ಟ ಸಂಪ್ರದಾಯ ಇತ್ತು. ಆದರೆ ನಾನು ಅದಕ್ಕೆಲ್ಲಾ ಅವಕಾಶ ಕೊಡಲಿಲ್ಲ ಎಂದು ಹೇಳಿದರು.

ಇದೇ ವೇಳೆ ಎಚ್ ಕೆ ಪಾಟೀಲರು ಗದಗವನ್ನು ಬರದ ಜಿಲ್ಲೆ ಎಂದು ಘೋಷಣೆ ಮಾಡದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬ ಹೇಳಿಕೆ ಬಗ್ಗೆ, ಗದಗ ಜಿಲ್ಲೆಯ ಪ್ರವಾಸ ಮಾಡಿದ್ದೇನೆ. ನನ್ನ ಜೊತೆ ಪಾಟೀಲರು ಇದ್ದರು. ಅವರು ಹೇಳಿದ್ದು ಸತ್ಯ. ಮಲೆನಾಡಿನಲ್ಲೇ ಬರ ಬಂದಿದೆ ಎಂದರೆ, ಗದಗದಲ್ಲಿ ಬರ ಇರುವುದಿಲ್ಲವೇ, ಜಿಲ್ಲೆಯ ಸಮಸ್ಯೆಯ ಅರಿವು ನನಗಿದೆ. ಈಗಾಗಲೇ 124 ತಾಲೂಕುಗಳು ಬರ ಘೋಷಣೆಯಾಗಿದೆ. 200 ತಾಲೂಕು ಘೋಷಣೆಯಾಗುವ ಸಾಧ್ಯ ಇದೆ. ಈ ಬಗ್ಗೆ ಅಗತ್ಯ ವರದಿಗಳು ಬರುತ್ತಿವೆ ಎಂದರು.

ವಿರೋಧ ಪಕ್ಷಗಳು 10ದಿನ ಅಧಿವೇಶನದ ಸಮಯ ವ್ಯರ್ಥ ಮಾಡಿದರು. ಅವರಿಗೆ ಸಮಯದ ಬೆಲೆ ತಿಳಿದಿಲ್ಲ. ರಾಜಕಾರಣ ಮಾಡುವುದು ಮಾತ್ರ ಅವರಿಗೆ ಗೊತ್ತು. ನಾನು ಕ್ಯಾಬಿನೆಟ್ ಸಭೆ ಕರೆದು ತೀರ್ಮಾನ ಮಾಡಬಹುದಿತ್ತು. ಆದರೆ ಹಾಗೆ ಮಾಡಲಿಲ್ಲ. ನಾಡಿನ ಜನರ ಸಮಸ್ಯೆ ಏನು ಅಂತ ತಿಳಿಯಬೇಕಿತ್ತು. ಸರ್ಕಾರ ಜನರ ದನಿಯಾಗಬೇಕು. ಜನರ ಮಾತಿಗೆ, ಅವರ ಬಾವನೆ ಬೆಲೆ ಕೊಡಬೇಕು ಅಂತ ವಿಶೇಷ ಅಧಿವೇಶನ ಆಯೋಜಿಸಿ ಚರ್ಚೆಗೆ ಕರೆದಿದ್ದೇನೆ ಎಂದರು.

ನಾನು ರೈತರು, ಜನರ ಜೊತೆ ಮಾತನಾಡಿದ್ದೇನೆ. ಪ್ರವಾಸ ಮಾಡಿದ್ದೇನೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೇನೆ. ಆಗ ಸಮಯ ವ್ಯರ್ಥ ಮಾಡಿ ಈಗ ಹೆಚ್ಚಿಗೆ ಸಮಯ ಬೇಕು ಅಂದರೆ ಹೇಗೆ, ವಿರೋಧ ಪಕ್ಷಗಳಿಗೆ ರಾಜಕೀಯ ಮುಖ್ಯ. ನಮಗೆ ಅಭಿವೃದ್ಧಿ ಮುಖ್ಯ, ರೈತರ ಸಮಸ್ಯೆ ಮುಖ್ಯ. ಜನರ ಹಸಿವು ನೀಗಿಸುವುದು ಮುಖ್ಯ ಎಂದು ಹೇಳಿದರು.

ಸರ್ಕಾರದ ಹಿತಕ್ಕಾಗಿ ಸಲಹೆ ನೀಡಿದೆ. ಹಣಕಾಸು ಸಚಿವನಾಗಿ ನನಗೆ ಯಾವ ಯೋಜನೆಯನ್ನು ನಿಲ್ಲಿಸಬೇಕು, ಯಾವ ಯೋಜನೆ ಸೇರಿಸಬೇಕು ಎನ್ನುವುದು ತಿಳಿದಿದೆ. ಎಲ್ಲಾ ಬೆಲೆಗಳು ಗಗನಕ್ಕೆ ಏರಿಕೆಯಾಗಿವೆ, ಜನರ ಆದಾಯ ಕುಸಿದು ಹೋಗಿದೆ. ಹಾಗಾಗಿ 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ರೈತರು, ಜನರ ಬದುಕಿಗೆ ನೆರವಾಗುತ್ತಿದ್ದೇವೆ. ಈ ಮಧ್ಯೆ ಕರ್ನಾಟಕ ಅಭಿವೃದ್ಧಿಯಲ್ಲಿ ಮುಂದಿದೆ ಎಂದು ಹೇಳಿದರು.

ನಾವು ಅಧಿಕಾರದಲ್ಲಿ ಇದ್ದೇವೆ. ಹೀಗಾಗಿ ಏನು ಮಾಡಬೇಕು ಎನ್ನುವ ಅರಿವು ನಮಗಿದೆ. ಕೇಂದ್ರ ಸರ್ಕಾರ ತನ್ನದೇ ಆದ ಯೋಚನೆಗಳನ್ನು ಮಾಡುತ್ತಿದೆ. ಕೇವಲ ಮಾತನಾಡುವುದಲ್ಲ. ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಕೊಡಬೇಕಾದ ಅನುದಾನವನ್ನು ಮೊದಲಿ ನೀಡಲಿ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ನಿರ್ಮಲಾಸೀತಾರಾಮನ್ ಹಾಗೂ ಬಸವರಾಜ ಬೊಮಾಮಾಯಿ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಣೆ ಮಾಡಿದರು. ಮೊದಲು ಅದನ್ನು ಕೊಡಿ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular