HomeIndiaಅನಂತ ಅಂಬಾನಿ ವಿವಾಹ ಮಹೋತ್ಸವದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

ಅನಂತ ಅಂಬಾನಿ ವಿವಾಹ ಮಹೋತ್ಸವದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

ಮುಂಬೈ: ರಿಲೈನ್ಸ್ ಮುಖ್ಯಸ್ಥ ಮುಕೇಶ್ ಅಂಬನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವ ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ವೈಭವಯುತವಾಗಿ ನಡೆಯುತ್ತಿದ್ದು, ಅದ್ದೂರಿ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ.

ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಶುಕ್ರವಾರ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ ಷನ್ ನಲ್ಲಿ ನಡೆದಿದೆ. ಇಂದು ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ನವ ದಂಪತಿಗಳಿಗೆ ಶುಭ ಆಶಿರ್ವಾದ ಕಾರ್ಯಕ್ರಮ ನಡೆಯುತ್ತಿದ್ದು, ಈ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಭಾಗಿಯಾಗಿರುವುದು ವಿಶೇಷ.

ಡಿಸಿಎಂ ಡಿ.ಕೆ.ಶಿವಕುಮಾರ್, ಪತ್ನಿ ಉಷಾ ಹಾಗೂ ಮಗಳು ಐಶ್ವರ್ಯಾ ಹಾಗೂ ಕುಟುಂಬದವರು ಅನಂತ್ ಅಂಬಾನಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಅನಂತ ಅಂಬಾನಿ ದಂಪತಿಗೆ ಶುಭ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಶುಭ ಆಶಿರ್ವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬ್ರಿಟನ್ ಪ್ರಧಾನಿ ಟೋನಿ ಬ್ಲೇರ್ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಔಪಚಾರಿಕ ಮಾತುಕತೆ ನಡೆಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular