HomeKarnatakaBIG NEWS: ಈ ಬಾರಿ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ:...

BIG NEWS: ಈ ಬಾರಿ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ: ಕಾಗೇರಿ, ಕೋಣೆಮನೆ, ಸೂಲಿಬೆಲೆ ಅಭ್ಯರ್ಥಿಗಳಾಗುವ ಸಂಭವ

ಬೆಂಗಳೂರು: ವಿವಾದಿತ ಹೇಳಿಕೆಗಳ ಕಾರಣದಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮರು ಸ್ಪರ್ಧೆಗೆ ಅವಕಾಶ ಸಿಗುವ ಸಾಧ್ಯತೆ ಕ್ಷೀಣಿಸಿದೆ.

ಸಂವಿಧಾನ ತಿದ್ದುಪಡಿ ಸೇರಿದಂತೆ ಹಲವು ಸೂಕ್ಷ್ಮ ವಿಚಾರ ಪ್ರಸ್ತಾಪಿಸಿ ವಿವಾದಕ್ಕೆ ಗುರಿಯಾದ ಅನಂತ್ ಕುಮಾರ್ ಹೆಗಡೆಯವರಿಗೆ ಟಿಕೆಟ್ ಕೈತೋಪುವ ಸಾಧ್ಯತೆ ಇದೆ. ಈ ಬಾರಿ ಅನಂತ್ ಕುಮಾರ್ ಹೆಗಡೆಯವರಿಗೆ ಟಿಕೆಟ್ ನೀಡುವುದಿಲ್ಲ ಎನ್ನುವ ಚರ್ಚೆ ಆರಂಭದಿಂದಲೂ ನಡೆದಿತ್ತು. ಕಳೆದ ಒಂದು ವರ್ಷದಿಂದ ರಾಜಕಾರಣದಿಂದ ಅನಂತ್ ಕುಮಾರ್ ಹೆಗಡೆ ದೂರವಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದ ಅವರು ಜನ ಸಂಪರ್ಕದಲ್ಲಿ ತೊಡಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಅನಂತಕುಮಾರ ಹೆಗಡೆ ಬದಲಿಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಹೆಸರು ಪ್ರಮುಖವಾಗಿ ಕೇಳಿ ಬಂದಿದ್ದು, ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular