BIG NEWS: ತೆಂಗಿನಗುಂಡಿಯಲ್ಲಿ ತೆರವು ಮಾಡಿದ್ದ ಸ್ಥಳದಲ್ಲೇ ಮತ್ತೆ ಹನುಮಧ್ವಜ ಹಾರಿಸಿದ ಸಂಸದ ಅನಂತ್ ಕುಮಾರ್ ಹೆಗಡೆ

ಕಾರವಾರ: ಕೆಲ ದಿನಗಳ ಹಿಂದೆ ಭಟ್ಕಳದ ತೆಂಗಿನಗುಂಡಿಯಲ್ಲಿ ಧ್ವಜಕಟ್ಟೆ ಹಾಗೂ ಹನುಮ ಧ್ವಜ ತೆರವು ಮಾಡಲಾಗಿತ್ತು. ಇದೇ ಜಾಗದಲ್ಲಿ ಇದೀಗ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹನಮಧ್ವಜ ಹಾರಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಧ್ವಜ ಕಟ್ಟೆ ಹಾಗೂ ಸಾವರ್ಕರ್ ಬೋರ್ಡ್ ತೆರವು ಮಾಡಲಾಗಿತ್ತು. ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಘಟನೆಯ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಇದೀಗ ಬಿಜೆಪಿ ಕಾರ್ಯಕರ್ತರ ಸಭೆಗೆಂದು ತೆಂಗಿನಗುಂಡಿ ಗ್ರಾಮಕ್ಕೆ ಆಗಮಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ, ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ ತೆರವು ಮಾಡಲಾಗಿದ್ದ ಸ್ಥಳದಲ್ಲೇ ಹನುಮಧ್ವಜವನ್ನು ಹಾರಿಸಿದ್ದಾರೆ. ಅಲ್ಲದೇ ಸಾವರ್ಕರ್ ಬೋರ್ಡ್ ಕೂಡ ಅಳವಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read