HomeKarnatakaBIG NEWS: ಬಿಜೆಪಿ ಸಭೆಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆಗೆ ಕಾರ್ಯಕರ್ತರಿಂದಲೇ ಕ್ಲಾಸ್

BIG NEWS: ಬಿಜೆಪಿ ಸಭೆಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆಗೆ ಕಾರ್ಯಕರ್ತರಿಂದಲೇ ಕ್ಲಾಸ್

ಬೆಳಗಾವಿ: ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಬಿಜೆಪಿ ಕಾರ್ಯಕರ್ತರೇ ಸಭೆಯಲ್ಲಿ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದರು ಕಾರ್ಯಕರ್ತರಿಗೂ ಸಿಗುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಯತ್ತಲೂ ಸರಿಯಾಗಿ ಗಮನ ಹರಿಸುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಹಲವು ವರ್ಷಗಳಿಂದ ನೀವು ಕಾರ್ಯಕರ್ತರ ಕೈಗೆ ಸಿಕ್ಕಿಲ್ಲ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಖಾನಾಪುರದಲ್ಲಿ ಸಂಸದರ ಕಾರ್ಯಾಲಯ ತೆರೆಯಬೇಕು. ಖಾನಾಪುರ ಜನ ಬೆಳಗಾವಿಗೆ ಹೋದರೆ ಕಾರವಾರಕ್ಕೆ ಹೋಗಿ ಅಂತಾರೆ. ಕಾರವಾರಕ್ಕೆ ಹೋದರೆ ನೀವು ಬೆಳಗಾವಿ ಜಿಲ್ಲೆಯವರು ಅಂತಾರೆ. ಖಾನಾಪುರ ಜನತೆ ನಡುವೆ ಸಿಲುಕಿ ಒದ್ದಾಡುವ ಸ್ಥಿತಿ ಇದೆ. ಕಾರ್ಯಕರ್ತರಿಗೆ ನಿಮ್ಮ ಕಡೆಯಿಂದ ಸ್ಪಂದನೆ ಸಿಗುತ್ತಿಲ್ಲ. ಈ ಬಗ್ಗೆ ಸ್ಪಷ್ಟ ನಿಲುವು ಕೈಗೊಳ್ಳುವಂತೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular