HomeKarnatakaಸಿಎಂ ಸಿದ್ದರಾಮಯ್ಯನವರಿಗೆ ಧಮ್ ಇದ್ರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ: ಅನಂತಕುಮಾರ್ ಹೆಗ್ಡೆ

ಸಿಎಂ ಸಿದ್ದರಾಮಯ್ಯನವರಿಗೆ ಧಮ್ ಇದ್ರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ: ಅನಂತಕುಮಾರ್ ಹೆಗ್ಡೆ

ಕಾರವಾರ: ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಸರ್ಕಾರ ಹುಚ್ಚು ಸರ್ಕಾರವಾಗಿದೆ. ಅಲ್ಪಸಂಖ್ಯಾತರ ಮತಗಳು ಇಲ್ಲದೆ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಅವರು ಎಂದಿಗೂ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರು ಯಾರು ಬೇಕಾದರೂ ಏನು ಬೇಕಾದರೂ ಡ್ರೆಸ್ ಹಾಕಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ. ಇಂತಹ ಹೇಳಿಕೆ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತದೆ. ಅವರು ಹಿಜಾಬ್ ಹಾಕಿಕೊಂಡು ಹೋಗುತ್ತಾರೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗುತ್ತಾರೆ. ಹಿಜಾಬ್  ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular