ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ: ಬಿಜೆಪಿ ಶಾಸಕ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಹತ್ವದ ಹೇಳಿಕೆ

ಕಾರವಾರ: ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಾತನಾಡಿದ ಸಿಎಂ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆ ಮನುವಾದಿ. ತಾವು ಹಿಂದುತ್ವವೆಂದು ಹೇಳಿಕೊಳ್ಳಲು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅನಂತಕುಮಾರ ಹೆಗಡೆಗೆ ಸಂಸ್ಕೃತಿ ಇಲ್ಲ ಎಂದು ವಾಗ್ದಾಳಿ ನಡೆಸಿದ ಸಿದ್ಧರಾಮಯ್ಯ, ಸಂಸ್ಕೃತಿಯೇ ಇಲ್ಲದ ವ್ಯಕ್ತಿಯ ಬಗ್ಗೆ ಏನು ಮಾತನಾಡಲು ಆಗುತ್ತದೆ. ಕಳೆದ ನಾಲ್ಕು ವರ್ಷಗಳಿಂದ ಅನಂತಕುಮಾರ ಹೆಗಡೆ ಎಲ್ಲಿ ಹೋಗಿದ್ದರು? ಅಭಿವೃದ್ಧಿ ಕೆಲಸ ಮಾಡದ ವ್ಯಕ್ತಿಯನ್ನು ನೀವೇ ಆಯ್ಕೆ ಮಾಡಿದ್ದೀರಿ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬಂದರೆ ಹೆಬ್ಬಾರ್ ಅವರನ್ನು ಸ್ವಾಗತಿಸುತ್ತೇವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಿವರಾಮ್ ಹೆಬ್ಬಾರ್ ನನ್ನ ಬಳಿ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read