ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುಪಡೆದುಕೊಳ್ಳುತ್ತಿದೆ. ಈ ನಡುವೆ ಅನನ್ಯಾ ಭಟ್ ನಾಪತ್ತೆ ಪ್ರಕರಣ ಭಾರಿ ಸುದ್ದಿಯಾಗಿತ್ತು. ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.
ಅನನ್ಯಾ ಭಟ್ ನಾಪತ್ತೆ ಪ್ರಕರಣದ ತನಿಖೆ ಆರಂಭಿಸಿರುವ ಎಸ್ ಐಟಿ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದೆ. ಕೇಳಿದೆ. ಈ ನಡುವೆ ಸುಜಾತಾ ಭಟ್ ಕೇಸ್ ವಾಪಸ್ ಪಡೆಯುವುದಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಹೋಗಿದ್ದಾಗ ನಾಪತ್ತೆಯಾಗಿದ್ದಾಳೆ ಎಂದು ಹೇಳಿಕೆ ನೀಡಿದ್ದ ಸುಜಾತಾ ಭಟ್, ತನ್ನ ಮಗಳ ಫೋಟೋ ಎಂದು ಫೋಟೋವೊಂದನ್ನು ತೋರಿಸಿದ್ದರು. ಆದರೆ ಆ ಫೋಟೋ ಅನನ್ಯಾ ಭಟ್ ಅವರದ್ದು ಅಲ್ಲ, ಬದಲಿಗೆ ವಾಸಂತಿ ಎಂಬ ಮಹಿಳೆಯದ್ದು ಎಂಬ ಆರೋಪಗಳು ಕೇಳಿಬರುತ್ತಿವೆ. ಈ ನಡುವೆ ಸುಜಾತಾ ಭಟ್ ತಾನು ಕೇಸ್ ವಾಪಸ್ ಪಡೆಯುವುದಾಗಿ ಹೇಳಿದ್ದು ಅವರ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಅನನ್ಯಾ ಭಟ್ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ ಐಟಿ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದು, ಅನನ್ಯಾ ಭಟ್ ಬಗ್ಗೆ ವಿವರ ನೀಡುವಂತೆ ಸೂಚಿಸಿದೆ. ಇದೀಗ ಎಸ್ ಐಟಿ ನೋಟಿಸ್ ಗೆ ಉತ್ತರಿಸದ ಸುಜಾತಾ ಭಟ್, ಆಡಿಯೋ ಒಂದನ್ನು ಹರಿಬಿಟ್ಟಿದ್ದು, ಕೇಸ್ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಈಗಾಗಲೇ ಅನನ್ಯಾ ಭಟ್ ನಾಪತ್ತೆ ಪ್ರಕರಣದ ತನಿಖೆ ಆರಂಭಿಸಿರುವ ಎಸ್ ಐಟಿ ಒಂದು ಹಂತದ ಮಾಹಿತಿ ಕಲೆ ಹಾಕಿದೆ. ಸುಜಾತಾ ಭಟ್ ಹಿನ್ನಲೆ ಬಗ್ಗೆಯೂ ಮಾಹಿತಿ ಸಂಗ್ರಹಿಸಿದೆ. ಒಟ್ಟಾರೆ ಈ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತೆ ಎಂಬುದನ್ನು ಕಾದುನೋಡಬೇಕಿದೆ.