HomeEntertainmentBIG NEWS: ಎಐ ಮೂಲಕ ನಟಿಯ ಅಶ್ಲೀಲ ವಿಡಿಯೋ ಸೃಷ್ಟಿಸಿ ಅಪ್ ಲೋಡ್: ಇಬ್ಬರು ಆರೋಪಿಗಳು...

BIG NEWS: ಎಐ ಮೂಲಕ ನಟಿಯ ಅಶ್ಲೀಲ ವಿಡಿಯೋ ಸೃಷ್ಟಿಸಿ ಅಪ್ ಲೋಡ್: ಇಬ್ಬರು ಆರೋಪಿಗಳು ಅರೆಸ್ಟ್

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಕಿಡಿಗೇಡಿಗಳು ಹೆಣ್ಣುಮಕ್ಕಳ ಅದರಲ್ಲಿಯೂ ಮುಖ್ಯವಾಗಿ ನಟಿಯರ ಫೋಟೋಗಳನ್ನು ಅಶ್ಲೀಲವಾಗಿ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕಿರುಕುಳ ನೀಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ತೆಲುಗು ನಟಿಯೊಬ್ಬರಿಗೆ ಕಿಡಿಗೇಡಿಗಳು ಇಂತದ್ದೇ ಕಿರುಕುಳ ನೀಡಿದ್ದು, ಸೈಬರ್ ಕ್ರೈಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತೆಲುಗು ಚಿತ್ರರಂಗ ಮತ್ತು ಟಿವಿ ಲೋಕದ ಜನಪ್ರಿಯ ನಟಿ, ನಿರೂಪಕಿ ಅನುಸೂಯ ಭಾರಧ್ವಜ ಅವರಿಗೆ ಆನ್​​ಲೈನ್​​ನಲ್ಲಿ ಕಿರುಕುಳ ನೀಡುತ್ತಿದ್ದ ಇಬ್ಬರನ್ನು ಸೈಬರಾಬಾದ್ ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜನಾರ್ದನ್ (29) ಮತ್ತು ಕೊಂಡಪುರಂ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರು ದುರುಳರು ಎಐ ಬಳಸಿ ಅನುಸೂಯ ಅವರ ಅಶ್ಲೀಲ ವಿಡಿಯೋಗಳನ್ನು ನಿರ್ಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ನಟಿ ಅನುಸೂಯಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವರ್ಷ ಡಿಸೆಂಬರ್ 23 ರಂದು ಅನುಸೂಯ ಹಲವು ಸಾಮಾಜಿಕ ಮಾಧ್ಯಮ ಪುಟಗಳು ತನ್ನ ವಿರುದ್ಧ ಮಾನಹಾನಿಕರ, ನಿಂದನಾತ್ಮಕ ಮತ್ತು ಅಶ್ಲೀಲ ವಿಷಯಗಳನ್ನು ಪ್ರಸಾರ ಮಾಡುತ್ತಿವೆ ಎಂದು ಆರೋಪಿಸಿದ್ದರು. ಇದು ತನ್ನ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುತ್ತಿದೆ ಎಂದು ಅವರು ದೂರಿದ್ದರು. ಕೂಡಲೇ ಅಂಥಹವರನ್ನು ಗುರುತಿಸಿ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದರು.

ದೂರು ಸ್ವೀಕರಿಸಿ ತನಿಖೆ ನಡೆಸಿದ ಸೈಬರಾಬಾದ್ ಸೈಬರ್ ಪೊಲೀಸರು ಹೈದರಾಬಾದ್​​ನಲ್ಲಿ ವಾಸವಿದ್ದ, ಆಂಧ್ರಪ್ರದೇಶದ ಕಡಪಾ ಮೂಲದ ಜನಾರ್ದನ್ ಎಂಬಾತನನ್ನು ಬಂಧಿಸಿದ್ದರು. ಈತ ‘@mmtt_official’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಡೆಸುತ್ತಿದ್ದ. ಈ ಖಾತೆಯ ಮೂಲಕ ಅನುಸೂಯ ಸೇರಿದಂತೆ ಇತರೆ ಕೆಲವು ನಟಿಯರನ್ನು ಗುರಿಯಾಗಿಸಿಕೊಂಡು ಎಐ ನಿರ್ಮಿತ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ. ಸಿಕಂದರಾಬಾದ್‌ನ ಪಶ್ಚಿಮ ಮಾರೇಡ್‌ಪಲ್ಲಿಯ ಆಟೋ ಚಾಲಕನಾಗಿರುವ ಅರುಣ್ ಕುಮಾರ್ ಎಂಬಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ರೀಲ್ಸ್‌ನಲ್ಲಿ ನಟಿಯ ವಿರುದ್ಧ ಅತ್ಯಂತ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಕ್ಕಾಗಿ ಈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ (IT Act) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular