CRIME NEWS : ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಉಸಿರುಗಟ್ಟಿಸಿ ಕೊಂದಿದ್ದ ‘ಕಿರಾತಕಿ ಸೊಸೆ’ ಅಂದರ್

ಬೆಂಗಳೂರು : ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಉಸಿರುಗಟ್ಟಿಸಿ ಕೊಂದಿದ್ದ ಕಿರಾತಕಿ ಸೊಸೆ ಸೇರಿ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೊಸೆ ರಶ್ಮಿ, ಅಕ್ಷಯ್, ಪುರುಷೋತ್ತಮ್ ಎಂದು ಗುರುತಿಸಲಾಗಿದೆ.

ಏನಿದು ಘಟನೆ

ಆರೋಪಿ ರಶ್ಮಿ ಮಂಜುನಾಥ್ ಎಂಬಾತನನ್ನು ಮದುವೆಯಾಗಿದ್ದರು. ಮದುವೆಯಾಗಿದ್ದರೂ ಮನೆ ಮೇಲೆ ಬಾಡಿಗೆಗೆ ಇದ್ದ ಅಕ್ಷಯ್ ಜೊತೆ ಸಂಪರ್ಕ ಇಟ್ಟುಕೊಂಡಿದ್ದಳು ಎನ್ನಲಾಗಿದೆ. ಅಲ್ಲದೇ ಇತ್ತ ಮನೆಯ ಹಣದ ವ್ಯವಹಾರ ಸಂಬಂಧ ಅತ್ತೆ ಲಕ್ಷ್ಮಮ್ಮ ಹಾಗೂ ರಶ್ಮಿ ಮಧ್ಯೆ ಜಗಳ ನಡೆಯುತ್ತಿತ್ತು.

ಈ ಹಿನ್ನೆಲೆ ಹೊಂಚು ಹಾಕಿದ ರಶ್ಮಿ ಪ್ರಿಯಕರ ಅಕ್ಷಯ್ ಮತ್ತು ಆತನ ಸ್ನೇಹಿತ ಪುರುಷೋತ್ತಮ್ ಜೊತೆ ಸೇರಿ ಉಸಿರುಗಟ್ಟಿಸಿ ಅತ್ತೆಯನ್ನು ಕೊಲೆ ಮಾಡಿದ್ದಾರೆ. ನಂತರ ಹಾರ್ಟ್ ಅಟ್ಯಾಕ್ ಎಂದು ಬಿಂಬಿಸಿದ್ದಳು.
ಸದ್ಯ. ಕಿರಾತಕಿ ಸೊಸೆ ರಶ್ಮಿ ಸೇರಿ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read