ವೈ ಎಸ್ ಆರ್ ಕಾಂಗ್ರೆಸ್ ಪಾರ್ಟಿಯಿಂದ ಜಿಗಿದು ಬಿಜೆಪಿ ಸೇರಿದ್ದ ವ್ಯಕ್ತಿಯ ಬರ್ಬರ ಹತ್ಯೆ

ವೈ ಎಸ್ ಆರ್ ಕಾಂಗ್ರೆಸ್ ಪಾರ್ಟಿಯಿಂದ ಬಿಜೆಪಿ ಸೇರಿದ್ದ ವ್ಯಕ್ತಿಯನ್ನ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಹತ್ಯೆ ಮಾಡಲಾಗಿದೆ.
ಆಡಳಿತಾರೂಢ ವೈಎಸ್‌ಆರ್‌ಸಿಪಿ ಸದಸ್ಯರು ಬೇಟೆಯಾಡುವ ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಮೃತನ ಪತ್ನಿ ಆರೋಪಿಸಿದ್ದಾರೆ.

ನಾಲ್ಕು ತಿಂಗಳ ಹಿಂದೆ ವೈಎಸ್‌ಆರ್‌ಸಿಪಿಯಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ 38 ವರ್ಷದ ಈಡಿಗ ಶಿವಕುಮಾರ್ ಗೌಡ್ ಅವರು ಶನಿವಾರ ಸಂಜೆ ತಮ್ಮ ಅಂಗಡಿಯಿಂದ ಮನೆಗೆ ತೆರಳುತ್ತಿದ್ದಾಗ ಹತ್ಯೆಗೀಡಾಗಿದ್ದರು.

ವೈಎಸ್‌ಆರ್‌ಸಿಪಿ ಯಲ್ಲಿನ ಭಿನ್ನಾಭಿಪ್ರಾಯಗಳಿಂದ ಬೇಸತ್ತು ಪಕ್ಷದಿಂದ ಹೊರಬಂದ ನಂತರ ಅವರು ಬಿಜೆಪಿ ಸೇರ್ಪಡೆಯ ನಂತರ ಬಿಜೆಪಿಯ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎನ್ನಲಾಗಿದೆ. ಪತ್ನಿ ಸುಜಾತ, ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿರುವ ಶಿವಕುಮಾರ್‌ ಗೌಡ್‌ ಈ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ.

ಘಟನೆಯನ್ನು ಖಂಡಿಸಿರುವ ಆಂಧ್ರಪ್ರದೇಶ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ, ಕಳೆದ ಕೆಲವು ದಿನಗಳಿಂದ ಕೊತಲಂ ಗ್ರಾಮದಲ್ಲಿ ಅಶಾಂತಿ ಉಂಟಾಗಿದೆ. ಸೂಕ್ತ ಪೊಲೀಸ್ ವ್ಯವಸ್ಥೆ ಇಲ್ಲದಿರುವುದೇ ಘಟನೆಗೆ ಕಾರಣವಾಗಿದ್ದು, ಕೊಲೆಯ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read