ಬೆಂಗಳೂರು: ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗಾಗಿ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಟ್ಟಿದೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಉದ್ಯಮಿಗಳಿಗೆ ಗಾಳ ಹಾಕಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗೂ ಸಚಿವ ನಾರಾ ಲೋಕೇಶ್ ಬೆಂಗಳೂರಿಗೆ ಸಮೀಪದಲ್ಲಿ ನಮ್ಮ ಜಮೀನು ಸಿದ್ಧವಿದ್ದು, ಅಲ್ಲಿಯೇ ಹೂಡಿಕೆ ಮಾಡಿ ಎಂದು ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.
“ಆತ್ಮೀಯ ಏರೋಸ್ಪೇಸ್ ಉದ್ಯಮ, ಇದರ ಬಗ್ಗೆ ಕೇಳಿ ಬೇಸರವಾಯಿತು. ನಿಮಗಾಗಿ ನನ್ನ ಬಳಿ ಇದಕ್ಕಿಂತ ಉತ್ತಮವಾದ ಐಡಿಯಾ ಇದೆ. ನೀವು ಆಂಧ್ರಪ್ರದೇಶವನ್ನು ಏಕೆ ನೋಡಬಾರದು? ಅತ್ಯುತ್ತಮ ಪ್ರೋತ್ಸಾಹ ಧನ ಮತ್ತು 8000 ಎಕರೆಗಳಿಗೂ ಹೆಚ್ಚು ಬಳಸಲು ಸಿದ್ಧವಾದ ಭೂಮಿ(ಬೆಂಗಳೂರಿನ ಹೊರಗೆ) ಹೊಂದಿರುವ ಆಕರ್ಷಕ ಏರೋಸ್ಪೇಸ್ ನೀತಿಯನ್ನು ನಾವು ನಿಮಗಾಗಿ ಹೊಂದಿದ್ದೇವೆ! ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗಲು ಆಶಿಸುತ್ತೇವೆ” ಎಂದು ನಾರಾ ಲೋಕೇಶ್ ತಿಳಿಸಿದ್ದಾರೆ.

