HomeIndiaಹೊಸ ಕಾರ್ ಗೆ ಪೂಜೆ ಸಲ್ಲಿಸಲು ಹೋದಾಗಲೇ ಭೀಕರ ಅಪಘಾತ: 4 ಮಂದಿ ಸಾವು

ಹೊಸ ಕಾರ್ ಗೆ ಪೂಜೆ ಸಲ್ಲಿಸಲು ಹೋದಾಗಲೇ ಭೀಕರ ಅಪಘಾತ: 4 ಮಂದಿ ಸಾವು

ಪಲ್ನಾಡು: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವು ಹಿಂತಿರುಗುತ್ತಿದ್ದಾಗ ಅಡ್ಡಂಕಿ-ನಾರ್ಕಟ್‌ ಪಲ್ಲಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಯಾಣಿಕರು ತಮ್ಮ ಹೊಸ ಕಾರ್ ಪೂಜೆ ಸಲ್ಲಿಸಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಸ್ವಗ್ರಾಮ ಸಿರಿಪುರಕ್ಕೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪಿದುಗುರಳ್ಳ ಗ್ರಾಮಾಂತರ ಠಾಣೆ ಸಬ್ ಇನ್ಸ್‌ ಪೆಕ್ಟರ್ ಮೋಹನ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular