ತಿರುಪತಿಯಲ್ಲಿ ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಆಕೆಯ ದೂರದ ಸಂಬಂಧಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು 24 ವರ್ಷದ ನಾಗರಾಜು ಎಂದು ಗುರುತಿಸಲಾಗಿದ್ದು, ಈತ ಸಂತ್ರಸ್ತೆಯ ತಾಯಿಯ ಚಿಕ್ಕಪ್ಪ ಎಂದು ತಿರುಪತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಎಲ್. ಸುಬ್ಬರಾಯುಡು ಶನಿವಾರ ತಿಳಿಸಿದ್ದಾರೆ.

ಮಹಿಳೆಯ ಮನೆಯ ಸಮೀಪದಲ್ಲಿಯೇ ವಾಸವಿದ್ದ ಆರೋಪಿ ಆಕೆಯೊಂದಿಗೆ ಆಗಾಗ್ಗೆ ಮಾತನಾಡುತ್ತಿದ್ದ. ಶುಕ್ರವಾರ ಸಂಜೆ ಚಾಕೊಲೇಟ್, ತಿಂಡಿ ಕೊಡಿಸುವ ಆಮಿಷವೊಡ್ಡಿ ಆಕೆಯನ್ನು ಎಎಂ ಪುರಂ ಗ್ರಾಮದ ಹೊರವಲಯದ ಹೊಲಕ್ಕೆ ಏಕಾಂತ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ಅದೇ ಜಾಗದಲ್ಲಿ ಆಕೆಯ ಶವವನ್ನು ಹೂತು ಹಾಕಿದ್ದಾನೆ.

ಅವಳು ಕಾಣೆಯಾಗಿದ್ದಾಳೆಂದು ಆಕೆಯ ಪೋಷಕರ ಗಮನಕ್ಕೆ ಬಂದಿದ್ದು, ಅವರು ಹುಡುಕಲು ಪ್ರಾರಂಭಿಸಿದ್ದಾರೆ. ಅವಳು ನಾಗರಾಜ ಜೊತೆ ಕೊನೆಯದಾಗಿ ಕಾಣಿಸಿಕೊಂಡಿದ್ದಾಳೆ ಎಂದು ಗೊತ್ತಾಗಿದೆ. ಪೋಷಕರು ನಾಪತ್ತೆಯಾದ ಬಗ್ಗೆ ದೂರು ನೀಡಿದ ನಂತರ, ಪೊಲೀಸರು ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ವಿಚಾರಣೆಗಾಗಿ ನಾಗರಾಜುನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗರಾಜು ಅವರೊಂದಿಗೆ ಪೊಲೀಸರು ಹುಡುಕಾಟ ನಡೆಸಿ, ಅಂತಿಮವಾಗಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಸರ್ಕಾರಿ ಶಾಲೆಯ ಬಳಿ ಸಂತ್ರಸ್ತೆಯ ಶವವನ್ನು ಪತ್ತೆ ಮಾಡಿದ್ದಾರೆ. ನಾಗರಾಜು ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಹೆಚ್ಚುವರಿ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಲು ಪ್ರಕರಣದ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯವನ್ನು ಕೋರಲಾಗುವುದು ಎಂದು ತಿರುಪತಿ ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read