ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಡಿಕ್ಕಿ ಹೊಡೆದು ಆಟೋದಲ್ಲಿದ್ದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪಲ್ನಾಡ್ ಜಿಲ್ಲೆ ಚಿಲಕಲೂರಿಪೇಟೆಯ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗುಂಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ವೇಲೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಪ್ರಕಾಶಂ ಜಿಲ್ಲೆಯ ಕೊಂಡಮಂಜುಲೂರಿನಿಂದ ವೇಲೂರಿಗೆ ಆಟೋ ತೆರಳುತ್ತಿತ್ತು. ವಿಜಯವಾಡದಿಂದ ತಿರುಪತಿಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ.

