ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ ಮೂರು ದಿನ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶದ ಉತ್ತರ, ದಕ್ಷಿಣ ಕರವಾಳಿ, ರಾಯಲಸೀಮಾ, ಯೆನಮ್ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಸಮುದ್ರಮಟ್ಟದಿಂದ 5.8 ಕಿ.ಮೀ ವರೆಗೆ ಚಂಡಮಾರುತ ಪರಿಚಲನೆ ವಿಸ್ತರಿಸುವ ಸಾಧ್ಯತೆ ಇದೆ. ಇಂದಿನಿಂದ ಡಿಸೆಂಬರ್ 20ರವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.

ಚಂಡಮಾರುತದ ಅಬ್ಬರ ಮುಂದಿನ 24ಗಂಟೆಗಳಲ್ಲಿ ಉತ್ತರ ತಮಿಳುನಾಡು , ದಕ್ಷಿಣ ಆಂಧ್ರ ಕರಾವಳಿಯತ್ತ ಬೀಸುವ ಸಾಧ್ಯತೆ ಇದ್ದು, ಬಳಿಕ ಆಂಧ್ರದ ಕರಾವಳಿಯುದ್ದಕ್ಕೂ ಉತ್ತರದ ಕಡೆಗೆ ಚಲಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮುಂದಿನ ಮೂರು ದಿನ ಒಣಹವೆ ಮುಂದುವರೆಯಲಿದ್ದು, ದಟ್ಟ ಮಂಜು ಹಾಗೂ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read