ಮಂಗಳೂರು: ಧರ್ಮಸ್ಥಳ ಪರ ನಿಂತ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಇಂದು ಸಂಜೆ 5 ಗಂಟೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿರುವ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಆರತಿ ಸೇವೆ ನೆರವೇರಿಸಲಿದ್ದಾರೆ.
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರೆದಿದೆ. ಇಲ್ಲಿನ ಬೆಳವಣಿಗೆಗಳ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ ಪವನ್ ಕಲ್ಯಾಣ್ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಗಮನಸೆಳೆದಿದೆ.