Shocking | ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಕುದಿಯುವ ಎಣ್ಣೆ ಸುರಿದ ಗೆಳೆಯ

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಪ್ರೀತಿಸಿದ ಯುವಕ ಕುದಿಯುವ ಎಣ್ಣೆ ಸುರಿದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ (ಜೆಎನ್‌ಟಿಯು) ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲೂರು ಜಿಲ್ಲೆಯ ತನ್ನ ಮನೆಯ ಕೊಠಡಿಯಲ್ಲಿ ಯುವಕ ಆಕೆಯ ಕೈ ಮತ್ತು ಕಾಲುಗಳ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದ.

ಸಂತ್ರಸ್ತೆ ಭಾನುವಾರ ಮುಂಜಾನೆ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ ಬಳಿಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆಕೆಯನ್ನು ಏಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಸಂತ್ರಸ್ತೆ ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ. ಏಲೂರು ನಿವಾಸಿಯಾಗಿರುವ ಯುವತಿ ದುಗ್ಗಿರಾಳ ನಿವಾಸಿ ಅನುದೀಪ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಐದು ದಿನಗಳ ಹಿಂದೆ ಅನುದೀಪ್ ವಿದ್ಯಾರ್ಥಿನಿಯನ್ನು ದುಗ್ಗಿರಾಳದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಆತ ವಿದ್ಯಾರ್ಥಿನಿಯನ್ನು ಒಂದು ಕೋಣೆಯಲ್ಲಿ ಕಟ್ಟಿಹಾಕಿ ಹಿಂಸಿಸುತ್ತಿದ್ದ.

ಕೊಲೆ ಬೆದರಿಕೆ ಹಾಕಿದ್ದ. ಮಧ್ಯರಾತ್ರಿಯ ನಂತರ ನೇಣು ಬಿಗಿದು ಕೊಲ್ಲಲು ಯೋಜಿಸಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ಆದಾಗ್ಯೂ, ಅವಳು ತಪ್ಪಿಸಿಕೊಂಡು ತನ್ನ ಮನೆ ತಲುಪಿದಳು. ಪೋಷಕರ ನೆರವಿನಿಂದ ಆಕೆ ದೂರು ದಾಖಲಿಸಿದ್ದಾಳೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಅನುದೀಪ್‌ಗಾಗಿ ಹುಡುಕಾಟ ನಡೆಸಿದ್ದಾರೆ.
ಆರೋಪಿಯು ಗಾಂಜಾ ಮತ್ತು ಇತರ ಮಾನಸಿಕ ಮಾದಕ ವ್ಯಸನಿಯಾಗಿದ್ದು, ಪ್ರೀತಿಯ ಹೆಸರಿನಲ್ಲಿ ಹಲವಾರು ಹುಡುಗಿಯರನ್ನು ವಂಚಿಸುತ್ತಿದ್ದ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read