HomeCrimeಲಾಡ್ಜ್ ನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಲಾಡ್ಜ್ ನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯ ಲಾಡ್ಜ್ ವೊಂದರಲ್ಲಿ ಮಹಿಳೆಯನ್ನು ಆಕೆಯ ಪತಿ ಕೊಲೆ ಮಾಡಿದ್ದಾನೆ.

ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ ಪೊಲೀಸರಿಗೆ ಶರಣಾಗಿದ್ದಾನೆ. ಕರ್ನಾಟಕ ಮೂಲದ ಮಹಿಳೆ 29 ವರ್ಷದ ರೂಬಿಯಾ ತಾಜ್ ಕೊಲೆಯಾದವರು ಎಂದು ಹೇಳಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ರೂಬಿಯಾ ತಾಜ್ ಮತ್ತು ಬೈಕ್ ಮೆಕಾನಿಕ್ ಶೇಕ್ ನವೀದ್ ಬಾಷಾ ಮದುವೆ 13 ವರ್ಷಗಳ ಹಿಂದೆ ನೆರವೇರಿದ್ದು, ನಾಲ್ವರು ಮಕ್ಕಳಿದ್ದಾರೆ. ದಂಪತಿ ನಡುವೆ ಕೌಟುಂಬಿಕ ಕಲಹ ಮತ್ತು ಅನೈತಿಕ ಸಂಬಂಧ ಶಂಕೆ ಕಾರಣದಿಂದ ಗಲಾಟೆಯಾಗಿ ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಸಂಬಂಧಿಕರು ಸಂಧಾನ ನಡೆಸಿ ಇಬ್ಬರನ್ನು ಒಂದಾಗಿಸಲು ಪ್ರಯತ್ನಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ಪಲಮನೇರಿಗೆ ಹೋಗಿದ್ದ ನವೀದ್ ಪತ್ನಿಯನ್ನು ಕರೆದುಕೊಂಡು ಚಿತ್ತೂರಿನಲ್ಲಿ ಶಾಪಿಂಗ್ ಮಾಡಿಸಿದ್ದಾನೆ. ತಡರಾತ್ರಿ ಆಗಿದ್ದರಿಂದ ಮದನಪಲ್ಲಿಗೆ ಬಂದು ಲಾಡ್ಜ್ ವೊಂದರಲ್ಲಿ ರೂಂ ಬುಕ್ ಮಾಡಿ ಉಳಿದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾಡ್ಜ್ ರೂಂಲ್ಲಿದ್ದಾಗ ಇಬ್ಬರ ನಡುವೆ ಅನೈತಿಕ ಸಂಬಂಧ ವಿಚಾರವಾಗಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ನವೀದ್ ಬಿಯರ್ ಬಾಟಲಿಯಿಂದ ರೂಬಿಯಾ ತಲೆಗೆ ಹೊಡೆದಿದ್ದಾನೆ. ನಂತರ ಬಾಟಲಿಯ ಚೂರಿನಿಂದ ಆಕೆಯ ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿದ್ದಾನೆ.

ಗುರುವಾರ ಬೆಳಗ್ಗೆ ನೇರವಾಗಿ ಮದನಪಲ್ಲಿ ಒನ್ ಟೌನ್ ಪೋಲಿಸ್ ಠಾಣೆಗೆ ತೆರಳಿ ಅಪರಾಧ ಕೃತ್ಯವನ್ನು ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ರಕ್ತದ ಮಡುವಿನಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಡ್ರಿಪ್ ತೆಗೆಯುವಾಗ ಆರು ತಿಂಗಳ ಮಗುವಿನ ಬೆರಳು ಕಟ್: ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಆರು ತಿಂಗಳ ಹೆಣ್ಣು ಮಗುವಿನ ಕೈಯಿಂದ ಡ್ರಿಪ್ ತೆಗೆಯುವಾಗ ಕಿರುಬೆರಳು ಕತ್ತರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದ್ಯರ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

 ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದ್ಯರು ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಘಟನೆಯ ನಂತರ ಮಗುವನ್ನು ನಾಲ್ಕು ಗಂಟೆಗಳ ಕಾಲ ತುರ್ತು ಚಿಕಿತ್ಸಾ ವಿಭಾಗದಲ್ಲಿ ಇರಿಸಲಾಗಿತ್ತು. ಈ ಸಂದರ್ಭದಲ್ಲಿ ಏನಾಯ್ತು ಎಂಬುದು ತಿಳಿಯಬೇಕಿದೆ. ಮಗುವಿನ ಆರೈಕೆಯಲ್ಲಿ ವೈದ್ಯರು ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದರೆ ಅಥವಾ ನಿಗದಿತ ವೈದ್ಯಕೀಯ ಶಿಷ್ಟಾಚಾರ ಅನುಸರಿಸದಿದ್ದರೆ ಅದು ನಿರ್ಲಕ್ಷ್ಯ ಪ್ರಕರಣವಾಗಬಹುದು.

ಹೀಗಾಗಿ ಪ್ರಕರಣದ ಬಗ್ಗೆ ವಸ್ತುನಿಷ್ಠ ತನಿಖೆ ನಡೆಸಬೇಕು. ಇದು ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣ ಎಂಬುದನ್ನು ನಿರ್ಧರಿಸಲು ತನಿಖಾ ಅಧಿಕಾರಿ ವಿಷಯ ತಜ್ಞರ ನೆರವು ಪಡೆದು ಸೂಕ್ತ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ಪೊಲೀಸರಿಗೆ ನಿರ್ದೇಶನ ನೀಡಿದೆ.

ಅನಾರೋಗ್ಯದ ಕಾರಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಡ್ರಿಪ್ ಹಾಕಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆ ಮಾಡಲು ವೈದ್ಯರು ಸೂಚಿಸಿದ ನಂತರ ನರ್ಸ್ ಡ್ರಿಪ್ ತೆಗೆಯುವಾಗ ಆಕಸ್ಮಿಕವಾಗಿ ಮಗುವಿನ ಕಿರುಬೆರಳು ಕತ್ತರಿಸಿದೆ ಎಂದು ಹೇಳಲಾಗಿದೆ. ಈ ಕುರಿತಾಗಿ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಮತ್ತು ವೈದ್ಯರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular